

ಹೊಳಲ್ಕೆರೆ: ವಿಶ್ವ ಹಿಂದೂ ಪರಿಷತ್, ಭಜರಂಗದಳ ಸಹಯೋಗದಲ್ಲಿ ಪಟ್ಟಣದಲ್ಲಿ ಪ್ರತಿ ವರ್ಷ ಆಯೋಜಿಸುವ ವಿಶ್ವ ಹಿಂದೂ ಮಹಾಗಣಪತಿ ಮಹೋತ್ಸವಕ್ಕೆ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಒಂಟಿಕಲ್ಲು ಮಠದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಸಭೆಯಲ್ಲಿ ಅಧ್ಯಕ್ಷರಾಗಿ ಧ್ರುವಕುಮಾರ್, ಕಾರ್ಯದರ್ಶಿಯಾಗಿ ಭೈರೇಶ್, ಅಣ್ಣಪ್ಪ, ಖಜಾಂಚಿಯಾಗಿ ವೆಂಕಟೇಶ್ ಅವರನ್ನು ಆಯ್ಕೆ ಮಾಡಲಾಯಿತು.
ಪುರಸಭೆ ಅಧ್ಯಕ್ಷ ಅಶೋಕ್, ಮುಖಂಡರಾದ ಚಂದ್ರಶೇಖರ್, ವಿನಯ್ ಇತರರಿದ್ದರು.