ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ನಿರ್ದೇಶನ

CTD T. venktesh---
Published on

ಚಿತ್ರದುರ್ಗ: ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ(ಮುರುಘ ರಾಜೇಂದ್ರ ಕ್ರೀಡಾಂಗಣ) ಜ.26ರಂದು ಬೆಳಗ್ಗೆ 9ಕ್ಕೆ ಆಯೋಜಿಸುವ ಗಣರಾಜ್ಯೋತ್ಸವ ಸಮಾರಂಭ ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿರಬೇಕು. ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಡಿಸಿ ಟಿ. ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿ,ಗಣರಾಜ್ಯೋತ್ಸವ ದೇಶ ಪ್ರೇಮ,ದೇಶ ಭಕ್ತಿ ಹಾ ಗೂ ಭಾರತದ ಶ್ರೇಷ್ಠ ಸಂವಿಧಾನ ಆಚರಣೆಯ ಪ್ರತೀಕವಾಗಿದೆ. ಅರ್ಥಪೂರ್ಣ ಸಮಾರಂಭಕ್ಕಾಗಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯತೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡಬೇಕೆಂದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ,ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ರಚಿಸಿರುವ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂರು ತಂಡಗಳಿಗೆ ಸಮಾರಂಭದಲ್ಲಿ ಪ್ರಶಸ್ತಿ ಪತ್ರ, ನೆನಪಿನ ಕಾಣಕೆ ನೀಡಿ ಗೌರವಿಸಲಾಗುವುದು ಎಂದರು.

ರಾಷ್ಟ್ರ ಧ್ವಜಾರೋಹಣದ ನಂತರ ಶಾಲಾ ಮಕ್ಕಳಿಂದ 2 ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಒಂದು ಸಾಂಸ್ಕೃತಿಕ ಕಾರ‌್ಯಕ್ರಮ ಹಾಗೂ ಸಂಜೆ ನಗರದ ತರಾಸು ರಂಗಮಂದಿರದಲ್ಲಿ ಪ್ರತ್ಯೇಕವಾಗಿ ಸಾಂಸ್ಕೃತಿಕ ಕಾರ‌್ಯಕ್ರಮಗಳನ್ನು ಏರ್ಪಡಿಸಬೇಕು. ದೇಶಭಕ್ತಿ ಬಿಂಬಿಸುವ ಗಾಯನಗಳಿಗೆ ಆದ್ಯತೆ ಇರಬೇಕೆಂದು ಜಿಲ್ಲಾಧಿಕಾರಿ,ಡಿಡಿಪಿಐ ಎಂ.ಆರ್. ಮಂಜುನಾಥ್ ಅವರಿಗೆ ಸೂಚಿಸಿದರು. ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ,ಸನ್ಮಾನಕ್ಕೆ ಆಯ್ಕೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ ಅವರು,ಕಾರ‌್ಯಕ್ರಮದಲ್ಲಿ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕೆಂದು ನಿರ್ದೇಶಿಸಿದರು. ಜಿಪಂ ಸಿಇಒ ಎಸ್.ಜೆ.ಸೋಮ ಶೇಖರ್,ಎಎಸ್‌ಪಿ ಎಸ್.ಜೆ.ಕುಮಾರಸ್ವಾಮಿ,ಎಸಿ ಎಂ.ಕಾರ್ತಿಕ್ ಮತ್ತಿತರರು ಇದ್ದರು.

------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net