ಗಣಿ ಇಲಾಖೆ ವಿರುದ್ಧ ಎಬಿವಿಪಿ ಪ್ರತಿಭಟನೆ

07arsph1ep
?????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಅರಸೀಕೆರೆ: ಟಿಪ್ಪರ್ ಲಾರಿಗೆ ಸಿಲುಕಿ ಮೃತಪಟ್ಟ ಮರಟಗೆರೆ ಭೋವಿ ಕಾಲೋನಿ ಗ್ರಾಮದ ಯುವಕ ಸಿದ್ದರಾಮೇಶ್ ಕುಟುಂಬಕ್ಕೆ ಸರ್ಕಾರ ಹಾಗೂ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ತಕ್ಷಣವೇ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಎಬಿವಿಪಿ ಸಂಘಟನೆ ವತಿಯಿಂದ ವಿದ್ಯಾರ್ಥಿಗಳು ನಗರದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.


ಮುಖಂಡ ಗಿರೀಶ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಸೇರಿ ಹಲವು ಕಾಮಗಾರಿಗಳಿಗೆ ಜಲ್ಲಿ ಮತ್ತು ಎಂಸ್ಯಾಂಡ್ ಸಾಗಿಸುವ ಟಿಪ್ಪರ್‌ಗಳ ಓಡಾಟ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಎಗ್ಗಿಲ್ಲದೇ ಸಾಗಿದ್ದು, ಸರಣಿ ಅಪಘಾತಗಳು ಸಂಭವಿಸುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಶಾಲಾ, ಕಾಲೇಜುಗಳ ಆರಂಭ ಹಾಗೂ ಮುಕ್ತಾಯದ ವೇಳೆ ಟಿಪ್ಪರ್‌ಗಳ ಸಂಚಾರಕ್ಕೆ ನಗರದಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ನಂಬರ್ ಪ್ಲೇಟ್ ಇಲ್ಲದ ಅನೇಕ ಟಿಪ್ಪರ್‌ಗಳು ಓಡಾಟ ನಡೆಸುತ್ತಿದ್ದು, ಕಡಿವಾಣ ಇಲ್ಲದಂತಾಗಿದೆ. ಜಿಲ್ಲಾಡಳಿತ ತಕ್ಷಣವೇ ಮಧ್ಯೆ ಪ್ರವೇಶಿಸಿ ಜೀವ ಕಳೆದುಕೊಂಡಿರುವ ಯುವಕ ಕುಟುಂಬಕ್ಕೆ ಮಾನವೀಯ ನೆಲೆಗಟ್ಟಿನಲ್ಲಿ ಪರಿಹಾರ ನೀಡುವ ಜತೆಗೆ ಅನಧಿಕೃತ ಟಿಪ್ಪರ್ ಸಂಚಾರಕ್ಕೆ ಬ್ರೇಕ್ ಹಾಕಬೇಕು ಎಂದು ಆಗ್ರಹಿಸಿದರು.


ಸೋಮೇಶ್, ಜಯಂತ್, ಧನುಷ್, ಮೇಘನಾ ಇನ್ನಿತರರು ನೇತೃತ್ವ ವಹಿಸಿದ್ದರು. ರೈತಸಂಘದ ರಾಜ್ಯ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್, ಅಯೂಬ್ ಪಾಷಾ ಸೇರಿ ಹಲವರು ಸಾಥ್ ನೀಡಿದರು. ಸ್ಥಳಕ್ಕಾಗಮಿಸಿದ ಗ್ರೇಡ್-2 ತಹಸೀಲ್ದಾರ್ ಫಾಲಾಕ್ಷ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net