ಗಣೇಶ ಮೂರ್ತಿ ತಯಾರಿ ಜೋರು

Published on

ಹುಬ್ಬಳ್ಳಿ: ವಿಘ್ನನಿವಾರಕನ ಆಗಮನಕ್ಕೆ ಇನ್ನೂ ಒಂದು ತಿಂಗಳಷ್ಟೇ ಬಾಕಿ ಇದೆ. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಮೂರ್ತಿ ತಯಾರಕರು ಸುಮಾರು ಐದಾರು ತಿಂಗಳಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಮನೆ, ಸಂಘ, ಸಂಸ್ಥೆಗಳ ಕಚೇರಿಯಲ್ಲಿ ಪ್ರತಿಷ್ಠಾಪಿಸಲು ನೂರಾರು ಸಣ್ಣ ಮೂರ್ತಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಇಡಲು ಹಲವಾರು ದೊಡ್ಡ ಮೂರ್ತಿಗಳು ಸಿದ್ಧಗೊಂಡಿವೆ. ಗಣೇಶ ಮೂರ್ತಿಗಳಿಗೆ ಅಂತಿಮ ರೂಪ ನೀಡುವುದಷ್ಟೇ ಬಾಕಿ ಉಳಿದಿದೆ. ಇನ್ನೂ ಕೆಲವೇ ದಿನಗಳಲ್ಲಿ ಮೂರ್ತಿ ತಯಾರಕ ಕಲಾವಿದರ ಕೈಯಲ್ಲಿವಿನಾಯಕ ಹಲವಾರು ರೂಪದಲ್ಲಿ ಕಾಣಿಸಿಕೊಳ್ಳಲಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net