ಗಣೇಶೋತ್ಸವ ಶಾಂತಿಯುತವಾಗಿ ಆಚರಿಸಿ

24ark3
Published on

ಅರಕಲಗೂಡು: ತಾಲೂಕಿನಲ್ಲಿ ಗಣೇಶ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಅಗತ್ಯ ಕ್ರಮವಹಿಸಬೇಕು ಎಂದು ತಹಸೀಲ್ದಾರ್ ಕೆ.ಸಿ.ಸೌಮ್ಯಾ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಅಂತರ ಇಲಾಖಾ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗಣೇಶ ಹಬ್ಬದ ಪ್ರಯುಕ್ತ ಭಕ್ತರು ಗಣಪತಿ ಪ್ರತಿಷ್ಠಾಪನೆ ಸಂಬಂಧ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಗಣೇಶೋತ್ಸವ ಆಚರಿಸಬೇಕು. ಬೆಳಕು, ನೀರಿನ ವ್ಯವಸ್ಥೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ತುರ್ತು ವೈದ್ಯಕೀಯ ನೆರವು, ಸೆಸ್ಕ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಿಪಿಐ ವಸಂತಕುಮಾರ್, ಸಬ್ ಇನ್‌ಸ್ಪೆಕ್ಟರ್ ಕಾವ್ಯಾ, ಗ್ರೇಡ್- 2 ತಹಸೀಲ್ದಾರ್ ಸಿ.ಸ್ವಾಮಿ, ತಾಪಂ ಅಧಿಕಾರಿ ಪ್ರಕಾಶ್, ಸಿಡಿಪಿಒ ವೆಂಕಟೇಶ್, ಪುರಸಭೆ ಮುಖ್ಯಾಧಿಕಾರಿ ನಾಗೇಂದ್ರ ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net