ಗದಗ: ಕಪ್ಪತ್ತಗುಡ್ಡ ಉಳಿಸಿ: ಪ್ರಧಾನಿಗೆ ನಂದಿವೇರಿ ಶ್ರೀಗಳಿಂದ ಪತ್ರ

26GDG05A
Published on

ಗದಗ: ಅಪಾರ ಆರ್ಯರ್ವೇದಿಕ ಗಿಡಮೂಲಿಕೆ ಮತ್ತು ಖನಿಜ ಸಂಪತ್ತು ಹೊಂದಿರುವ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಚಿನ್ನದ ಗಣಿಗಾರಿಕೆ ನಡೆಸಲು ಹಲವು ಕಂಪನಿಗಳು ಹೊಂಚು ಹಾಕಿ ಕುಳಿತಿದ್ದು ಇದಕ್ಕೆ ಅವಕಾಶ ಮಾಡಿಕೊಡದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ನಂದಿವೇರಿ ಮಠದ ಶಿವಕುಮಾರ ಶ್ರೀಗಳು ಪತ್ರ ಬರೆದಿದ್ದಾರೆ.
ಗದಗ ಜಿಲ್ಲೆಯ ಈ ಕಪ್ಪತ್ತಗುಡ್ಡ ಉತ್ತರ ಕರ್ನಾಟಕದ ಹಸಿರು ಸಹ್ಯಾದ್ರಿ ಎಂಬ ಖ್ಯಾತಿಗೆ ಒಳಪಟ್ಟಿದೆ ಭೂಗಳ್ಳರಿಂದ ಕಪ್ಪತ್ತಗುಡ್ಡ ಉಳಿಸುವಂತೆ ಶ್ರೀಗಳು ಪ್ರಧಾನಿ ಮೋದಿ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕಪ್ಪತ್ತಗುಡ್ಡದಲ್ಲಿ ಚಿನ್ನದ ಗಣಿಗಾರಿಕೆ ನಡೆಸಲು ಹಲವು ಕಂಪನಿಳು ಹುನ್ನಾರ ನಡೆಸಿವೆ. ಅರಣ್ಯ ಇಲಾಖೆ ಕಂಪನಿಗಳ ಅಜಿರ್ ತಿರಸ್ಕರಿಸಿದರೂ ಗಣಿಗಾರಿಕೆ ನಡೆಸಲು ಅವಕಾಶ ಮಾಡಿಕೊಡುವಂತೆ ಪದೇ ಪದೆ ಸರ್ಕಾರ ಹಾಗೂ ಅರಣ್ಯ ಇಲಾಖೆಗೆ ಅಜಿರ್ ಸಲ್ಲಿಸುತ್ತಿದ್ದಾರೆ. ಸದ್ಯ ವನ್ಯಜಿವಿ ಧಾಮದ ಕಾನೂನು ಪ್ರಕಾರ 10 ಕಿ.ಮೀ. ವ್ಯಾಪ್ತಿ ಒಳಗಾಗಿ ಯಾವುದೇ ಗಣಿಗಾರಿಕೆಗೆ ಅನುಮತಿ ನೀಡುವಂತಿಲ್ಲ. ಆದ್ರೆ ಇದನ್ನು ಒಂದು ಕಿ.ಮೀ.ವ್ಯಾಪ್ತಿಗೆ ಇಳಿಸುವಂತೆ ಭೂಗಳ್ಳರ ಒಳಸಂಚು ರೂಪಿಸುತ್ತಿದ್ದಾರೆ. ಬಲ್ದೋಟಾ ಎಂಬ ಕಂಪನಿಯು ಸದ್ಯ ಹೈಕೋಟಿರ್ನಲ್ಲಿ ಈ ಬಗ್ಗೆ ಅಜಿರ್ ಸಲ್ಲಿಕೆ ಮಾಡಿದೆ. ಶತಾಯಗತಾಯ ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ನಡೆಸಲು ಈ ಮೂಲಕ ಎಲ್ಲ ಪ್ರಯತ್ನಗಳು ನಡೆಯುತ್ತಲಿವೆ ಎಂದು ಶ್ರೀಗಳು ಪತ್ರದ ಮೂಲಕ ಪ್ರಧಾನ ಮಂತ್ರಿಗೆ ತಿಳಿಸಿದ್ದಾರೆ.

ದಿಟ್ಟ ನಿರ್ಧಾರ ಕೈಗೊಳ್ಳಿ:
ನಮ್ಮ ಸಂಪತ್ತು ನಮ್ಮ ಹೊಣೆ. ಅದನ್ನು ಉಳಿಸಿ, ಬೆಳೆಸಿ, ಬಳಸಬೇಕು. ಪದೇ ಪದೆ ಕಪ್ಪತ್ತಗುಡ್ಡಕ್ಕೆ ಕಂಠಕ ತರುತ್ತಿರುವ ಗಣಿಗಾರಿಕೆ ಕಂಪನಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ಹಿಂದೆ ಹಲವು ಮಠಾಧೀಶರು ಮತ್ತು ಪರಿಸರ ಹೋರಾಟಗಾರರಿಂದ ಕಪ್ಪತ್ತಗುಡ್ಡ ರಕ್ಷಣೆ ಮಾಡುವ ಕೆಲಸವಾಗಿದೆ. ಇವರ ಹೋರಾಟದ ಫಲವಾಗಿ ಸರ್ಕಾರ ಕಪ್ಪತ್ತಗುಡ್ಡ ವನ್ಯಜಿವಿಧಾಮವೆಂದು ಘೋಷಿಸಿದೆ. ಹಾಗಾಗಿ ಗಣಿಗಾರಿಕೆ ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗೆ ಅವಕಾಶ ಮಾಡಿಕೊಡದಂತೆ ತಾವು ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಪ್ರಧಾನಿ ಅವರಲ್ಲಿ ಶ್ರೀಗಳು ಮನವಿ ಮಾಡಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net