ಗದಗ: ಕಬ್ಬು ಬೆಳೆಗೆ ಬೆಂಕಿ, ಹಾನಿ

20MDG3 KABBU
Published on

ಗದಗ:
ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ಬಿದ್ದು ಅಪಾರ ಪ್ರಮಾಣದ ಕಬ್ಬು ಬೆಳೆ ನಾಶವಾದ ಘಟನೆ ಗದಗ ಜಿಲ್ಲೆ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಾಗರಹಳ್ಳಿ ಗ್ರಾಮದ ರೈತ ಲಕ್ಷ್ಮಣ ಮೇವುಂಡಿ ಅವರಿಗೆ ಸಂಬಂಧಿಸಿದ ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ಬಿದ್ದಿದ್ದು ಅಪಾರ ನಷ್ಟ ಸಂಭವಿಸಿದೆ. ಸುಮಾರು 9 ಎಕರೆ ಪ್ರದೇಶದ ಕಬ್ಬು ಬೆಳೆಯು ಬೆಂಕಿಗಾಹುತಿಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮುಂಡರಗಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಅಗ್ನಿಶಾಮಕ ಸಿಬ್ಬಂದಿ ಅಗ್ನಿ ನಂದಿಸಿದ್ದರಿಂದ ಪಕ್ಕದಲ್ಲಿದ್ದ ಮತ್ತೊಂದು ಕಬ್ಬಿನ ಬೆಳೆಯನ್ನು ರಕ್ಷಣೆ ಮಾಡಿದ್ದಾರೆ. ಕಟಾವು ಮಾಡಬೇಕಿದ್ದ ಕಬ್ಬು ಬೆಂಕಿಗೆ ನಾಶವಾಗಿದ್ದು ರೈತರಲ್ಲಿ ನೋವುಂಟು ಮಾಡಿದೆ. ಅಂದಾಜು 7 ಲಕ್ಷ ರೂ.ನಷ್ಟು ನಷ್ಟವಾಗಿದೆ ಎಂದು ರೈತರು ತಿಳಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net