

ಗದಗ: ಕಂದಾಯ ವಿಷಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಶ್ರಮಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಹೇಳಿದರು.
ತಾಲೂಕಿನ ಹರ್ತಿ ಗ್ರಾಮದಲ್ಲಿ ಸೋಮವಾರ ಜರುಗಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರು ವಿನಾಕಾರಣ ಜಿಲ್ಲಾಧಿಕಾರಿಗಳ ಕಚೇರಿಗೆ ಅಲೆದಾಡುವುದುನ್ನು ತಪ್ಪಿಸಿ ಗ್ರಾಮದಲ್ಲೇ ವಾಸ್ತವ್ಯ ಮಾಡುವ ಮೂಲಕ ಸ್ಥಳದಲ್ಲೇ ಪರಿಹಾರ ನೀಡುವುದು ಈ ಕಾರ್ಯಕ್ರಮದ ಉದ್ದೇಶ. ಕಂದಾಯ ವಿಷಯ, ವಿವಿಧ ಇಲಾಖೆಗಳ ಯೋಜನೆಗಳ ಕುರಿತಂತೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಬಹುದು ಎಂದರು.
ಸಾರ್ವಜನಿಕರು ವೈಯಕ್ತಿಕ ಸಮಸ್ಯೆ ಹಾಗೂ ಕಂದಾಯ ವಿಷಯಗಳಾದ ಸಾಮಾಜಿಕ ಭದ್ರತೆ ಯೋಜನೆಗಳು, ಪಿಂಚಣಿ ಸವಲತ್ತು ಪಡೆಯುವುದು, ಸರ್ವೆ, ಪಹಣಿ ತಿದ್ದುಪಡಿ, ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕೂ ಸಹ ಈ ವೇದಿಕೆ ಸೂಕ್ತವಾಗಿದೆ. ಊರಿನ ಅಭಿವೃದ್ಧಿ ವಿಷಯಕ್ಕೆ ಸಂಬಂಧಿಸಿದಂತೆ ಒಮ್ಮತದ ನಿರ್ಣಯದೊಂದಿಗೆ ಕ್ರಮ ವಹಿಸಲು ಇದೊಂದು ಉತ್ತಮ ಕಾರ್ಯಕ್ರಮ. ಗ್ರಾಮಸ್ಥರೆಲ್ಲರೂ ಸಹಾನುಭೂತಿಯಿಂದ ವತಿರ್ಸುವ ಮೂಲಕ ತಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬೇಕು ಎಂದರು.
ತಹಸೀಲ್ದಾರ ಮಲ್ಲಿಕಾರ್ಜುನ ಮಾತನಾಡಿ ಕಾರ್ಯಕ್ರಮದ ರೂಪುರೇಷೆಗಳ ಕುರಿತು ವಿವರಿಸಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ಹಲವಾರು ವಿಶಿಷ್ಟತೆಗಳನ್ನು ಹೊಂದಿದೆ. ಗ್ರಾಮದ ಪ್ರತಿಯೊಬ್ಬರು ಪಾಲ್ಗೊಳ್ಳುವಿಕೆ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡುವಂತೆ ಕೋರಿದರು.
ವೇದಿಕೆಯ ಕಾರ್ಯಕ್ರಮದ ನಂತರ ಜಿಲ್ಲಾಧಿಕಾರಿಗಳು ಬಸವಣ್ಣ ಸಮುದಾಯ ಭವನದಲ್ಲಿ ಏರ್ಪಡಿಸಿದ ಸಾರ್ವಜನಿಕರ ಆರೋಗ್ಯ ತಪಾಸಣೆ, ಕಾಮಿರ್ಕ ಇಲಾಖೆಯ ಯೋಜನೆಗಳ ಪ್ರಚಾರ ಮಳಿಗೆ, ನರೇಗಾ, ತೋಟಗಾರಿಕೆ, ಕೃಷಿ, ಮಳಿಗೆಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಅನ್ನರ್ಪೂಣ ಮುದುಕಮ್ಮನವರ ಸೇರಿದಂತೆ ಹತಿರ್ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಜಿಲ್ಲಾ ಮಟ್ಟದ ವಿವಿಧ ಇಲಾಳೆಗಳ ಮುಖ್ಯಸ್ಥರು, ಗ್ರಾಮಸ್ಥರು ಇದ್ದರು.