

ಐತಿಹಾಸಿಕ ಲಕ್ಕುಂಡಿ ಉತ್ಸವ ಸಮಾರೋಪ
ಲೋಕೋಪಯೋಗಿ ಇಲಾಖೆ ಸಚಿವ ಸಿ ಸಿ ಪಾಟೀಲ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, 2018 ಚುನಾವಣೆ ನಂತರ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರವಾಹ ಬಂತು ಅಂದನ್ನು ಸಮರ್ಥವಾಗಿ ಎದುರಿಸುವಷ್ಟರಲ್ಲಿ ಕೊರೋನಾ ಬಂತು. ಜಗತ್ತೇ ತಲ್ಲಣವಾಗಿ ಈಗ ಸುಧಾರಿಸಿದೆ. ಈ ಎಲ್ಲ ಕಾರಣಗಳಿಂದ ಉತ್ಸವ ಮಾಡಲು ಸಾಧ್ಯ ಆಗಿರಲಿಲ್ಲ. ಈ ಬಾರಿ ಉತ್ಸವವನ್ನು ಅತ್ಯಂತ ಅದ್ದೂರಿ ಅರ್ಥ ಪೂರ್ಣ ಆಚರಣೆ ಮಾಡಲಾಗಿದೆ ಎಂದರು.
ಉತ್ಸವ ಯಶಸ್ಸಿಗೆ ಜಿಲ್ಲಾಡಳಿತ, ಅಧಿಕಾರಿಗಳು, ಜನ ಪ್ರತಿನಿಧಿಗಳು ಉತ್ತಮ ಕಾರ್ಯ ಮಾಡಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು ಎಂದರು. ವಿವಿಧ ಇಲಾಖೆಗಳ ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಸಹಕಾರ ಮರೆಯಲಾಗದು ಎಂದರು.
ಲೋಕೋಯೋಗಿ ಇಲಾಖೆ ಸಚಿವನಾಗಿ ನರಗುಂದ ಕ್ಷೇತ್ರಕ್ಕೆ ನೂರಾರು ಕೋಟಿ ಅನುದಾನ ನೀಡುವ ಮೂಲಕ ನರಗುಂದ ಮತ ಕ್ಷೇತ್ರದ ಸಂಪೂರ್ಣ ಅಭಿರುದ್ದಿ ಹೊಂದಿದ ಕ್ಷೇತ್ರವಾಗಿದೆ ಎಂದರು. ಕಳೆದ ಚುನಾವಣೆಯಲ್ಲಿ ಮತದಾರರು ಗೆಲ್ಲಿಸಿದ್ದಿರಿ. ಅದಕ್ಕೆ ಪ್ರತಿಯಾಗಿ ಮತದಾರರಿಗೆ ಋಣ ತೀರಿಸುವ ಅವಕಾಶ ನನಗೆ ಸಿಕ್ಕಿತ್ತು. ಅದನ್ನು ಸರಿಯಾಗಿ ಮಾಡಿದ ತೃಪ್ತಿ ನನಗಿದೆ ಎಂದು ಸಚಿವ ಸಿ ಸಿ ಪಾಟೀಲ ಹೇಳಿದರು.
ಎಂ.ಸಿ. ಎ ನಿಗಮದ ಅಧ್ಯಕ್ಷ ಎಂ ಎಸ್ ಕರಿಗೌಡ್ರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದು ಪಲ್ಲೇದ, ನಗರ ಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಲೆ, ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಗದಗಿನ, ಉಪಾಧ್ಯಕ್ಷ ರೇವಣಸಿದ್ದಪ್ಪ, ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ವಾಜಪೇಯಿ ಇದ್ದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಡಾ. ಸುಶೀಲಾ ಬಿ ಅತಿಥಿಗಳನ್ನು ಸ್ವಾಗತಿಸಿದರು. ಅಪರ ಜಿಲ್ಲಾಧಿಕಾರಿ ಮಾರುತಿ ಎಂ ಪಿ ವಂದಿಸಿದರು. ಇದೇ ಸಂದರ್ಭದಲ್ಲಿ ಲಕ್ಕುಂಡಿ ಗ್ರಾಮ ಪಂಚಾಯತ್ ಸರ್ವ ಸದಸ್ಯರುಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.