

ಗದಗ: ಪಜಾ, ಪಪಂ ಉಪಹಂಚಿಕೆ ಯೋಜನೆಯಡಿ ವಿವಿದ ಇಲಾಖೆಗಳಿಂದ ಕೈಗೊಳ್ಳಲಾದ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿಯೇ ರ್ಪೂಣಗೊಳಿಸಬೇಕು. ವಿನಾಕಾರಣ ವಿಳಂಬ ಮಾಡಿದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಪಜಾ, ಪಪಂ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಫಲಾನುಭವಿಗಳ ಆಯ್ಕೆ ಮಾಡುವಾಗ ಪಾರದರ್ಶಕತೆ ಇರಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ವಿಳಂಬವಾಗದೇ ಶ್ರೀಗತಿಯಲ್ಲಿ ತಲುಪುವಂತಾಗಬೇಕು. ಈ ಯೋಜನೆಯಡಿ ಬಿಡುಗಡೆಯಾಗುವ ಅನುದಾನ ದುರುಪಯೋಗವಾಗದಂತೆ ನಿಗಾವಹಿಸಬೇಕು. ಇಲಾಖಾವಾರು ಸಾಧಿಸಿದ ಪ್ರಗತಿ ವಿವರವನ್ನು ಇಲಾಖೆ ಅಂತರ್ಜಾಲದಲ್ಲಿ ತಪ್ಪದೇ ದಾಖಲಿಸುವುದು ಕೂಡ ತುಂಬಾ ಮುಖ್ಯವಾಗಿದೆ. ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗಬಾರದು. ಅಜಿರ್ಗಳನ್ನು ವಿನಾಕಾರಣ ತಿರಸ್ಕಾರ ಮಾಡಬಾರದು. ಸಕಾಲ ಯೋಜನೆಯಡಿ ಅಜಿರ್ ಇತ್ಯರ್ಥಗೊಳಿಸುವಾಗ ಬೇಕಾಗುವ ಅಗತ್ಯ ದಾಖಲೆಗಳನ್ನು ಮುಂಚಿತವಾಗಿಯೇ ತರಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸ್ವೀಕರಿಸಿದ ಅಜಿರ್ಗಳಿಗೆ ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಇಲಾಖಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಜಿಪಂ ಉಪಕಾರ್ಯದಶಿರ್ ಬಸವರಾಜ ಅಡವಿಮಠ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.