ಗದಗ: ಫೆ.16 ರಂದು ಶಿರಹಟ್ಟಿಗೆ ಪ್ರಜಾಧ್ವನಿ ಯಾತ್ರೆ: ಜಿ.ಎಸ್. ಪಾಟೀಲ

IMG-20230213-WA0001
Published on

ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಫೆ. 16 ರಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದ ಪ್ರಜಾಧ್ವನಿ ಕಾರ್ಯಕ್ರಮ ಜರುಗಲಿದೆ ಎಂದು ಮಾಜಿ ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಜ್ಯಾದ್ಯಂತ ಎರಡನೇ ಹಂತದ ಪ್ರಜಾಧ್ವನಿ ಯಾತ್ರೆ ಆರಂಭವಾಗಿದೆ. ಈ ಹಿನ್ನೆಲೆ ಶಿರಹಟ್ಟಿಯ ಡಬಾಲಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ಮುಖಂಡರು ಶಿರಹಟ್ಟಿಯ ಫಕ್ಕಿರೇಶ್ವರ ಮಠಕ್ಕೆ, ದರ್ಗಾಗೆ ಭೇಟಿ ನೀಡುವರು ಮತ್ತು ಶಿರಹಟ್ಟಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಅನಾವರಣಗೊಳಿಸುವರು ಎಂದು ಹೇಳಿದರು.

ಪ್ರಜಾಧ್ವನಿ ಯಾತ್ರೆಗೆ ಸಾಕಷ್ಟು ಬೆಂಬಲ ಸಿಗುತ್ತದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿನ ಜನಪರ ಕಾರ್ಯಕ್ರಮ ಹಾಗೂ ಬಿಜೆಪಿ ದುರಾಡಳಿತವನ್ನು ಜನರಿಗೆ ತಿಳಿಸುವ ಉದ್ದೇಶ ಹೊಂದಲಾಗಿದೆ ಎಂದು ಜಿ.ಎಸ್. ಪಾಟೀಲ ಹೇಳಿದರು.

ಮಾಜಿ ಶಾಸಕ ಡಿ.ಆರ್. ಪಾಟೀಲ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಸಾಮಾಜಿಕ ಬದುಕು ಅಧಃಪತನ ಹೊಂದುತ್ತಿದೆ. ಪತ್ರಕರ್ತರೂ ಕೂಡ ಕಾಂಗ್ರೆಸ್ ಪಕ್ಷವನ್ನು ಪ್ರಶ್ನೆ ಮಾಡಿದಂತೆ ಬಿಜೆಪಿಯನ್ನು ಪ್ರಶ್ನೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಶಿರಹಟ್ಟಿ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಬಿಜೆಪಿ ಸರ್ಕಾರ ಕೇವಲ ಜನರ ಭಾವನೆಗಳನ್ನು ಕೆರಳಿಸಿ ಮತಪಡೆಯುತ್ತದೆ ಹೊರತು ರಸ್ತೆ ದುರಸ್ತಿ, ಚೆಕ್ ಡ್ಯಾಮ್, ಆಶ್ರಯ ಯೋಜನೆ ಹಂಚಿಕೆಯಲ್ಲಿ ತಾರತಮ್ಯ ತೋರುತ್ತಿದೆ ಎಂದರು.

ಜಿ.ಎಸ್. ಗಡ್ಡದ್ದೇವರಮಠ, ರಾಮಕೃಷ್ಣ ದೊಡ್ಡಮನಿ, ಅಶೋಕ ಮಂದಾಲಿ, ಉಮಾಯನ್ ಮಾಗಡಿ, ಟಿ. ಈಶ್ವರ, ಯು.ಬಿ. ಸೋಮನಕಟ್ಟಿಮಠ, ಫಾರೂಖ್ ಹುಬ್ಬಳ್ಳಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net