ಗದಗ: ಮಹಿಳೆ ಶವವಾಗಿ ಪತ್ತೆ

b1b5c22a-d3b7-421c-a53b-50a94cfc738e
Published on

ಗದಗ: ಮಹಿಳೆಯೊಬ್ಬಳು ಬಾವಿಯೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಕಳಸಾಪುರ ವ್ಯಾಪ್ತಿಯ ಸಾಸ್ವಿಹಳ್ಳಿ ಫಾರ್ಮ್​​​​ನಲ್ಲಿ ನಡೆದಿದೆ. ರುಬಿನಾ ದಾವಲ್ ಸಾಬ್ ಕಣವಿ (27) ಮೃತ ಮಹಿಳೆ ಎಂದು ತಿಳಿದು ಬಂದಿದೆ.

ಎಂದಿನಂತೆ ಮನೆಯಲ್ಲಿ ಎಲ್ಲರೂ ಕೆಲಸಕ್ಕೆ ಹೋಗಿದ್ದರು. ಅವರು ವಾಪಸ್​ ಬಂದಾಗ ಬಾವಿಯಲ್ಲಿ ರುಬಿನಾ ಶವವಾಗಿ ಪತ್ತೆಯಾಗಿದ್ದಾರೆ. ಮಹಿಳೆಯ ಮೂರು ವರ್ಷದ ಮಗು ಜಾವೇದ್ ಕಣವಿ ಕೂಡ ಕಾಣೆಯಾಗಿದ್ದಾನೆ ಎನ್ನಲಾಗುತ್ತಿದ್ದು ಆತನಿಗಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದೆ. ರುಬಿನಾ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮೃತ ರುಬಿನಾ ಇದೇ ತೋಟದಲ್ಲಿ ಕೆಲಸಕ್ಕಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಮ್ಮ ಮಗಳನ್ನು ಕೊಲೆ ಮಾಡಲಾಗಿದೆ ಎಂದು ರುಬಿನಾ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಂದ ಗದಗ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನ ಇಲ್ಲಿಯ ಜಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net