ಗದಗ: ಲಕ್ಕುಂಡಿ ಉತ್ಸವದ ಅಂಗವಾಗಿ ಮೆರವಣಿಗೆಗೆ ಅದ್ಧೂರಿ ಚಾಲನೆ

10GDG05C(3)
Published on

ಗದಗ
ಮೂರು ದಿನಗಳ ಕಾಲ ನಡೆಯುವ ಐತಿಹಾಸಿಕ ಲಕ್ಕುಂಡಿ ಉತ್ಸವದ ಅಂಗವಾಗಿ ತಾಲೂಕಿನ ಲಕ್ಕುಂಡಿ ಗ್ರಾಮದ ಸರಕಾರಿ ಹಿರಿಯ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆ ಅದ್ಧೂರಿಯಾಗಿ ಜರುಗಿತು.
ಡೊಳ್ಳು ಕುಣಿತ, ನಂದಿಕೋಲು, ಕರಡಿ ಮಜಲು, ಜಾಂಜ್​ ಮೇಳ, ಕೀಲುಕುದುರೆ ಕಲಾವಿದರು ಮೆರವಣಿಗೆಯ ಮೆರುಗನ್ನು ಹೆಚ್ಚಿಸಿದರು. ಸಾವಿರಕ್ಕೂ ಹೆಚ್ಚು ಮಹಿಳೆಯರು ಕುಂಭ ಹೊತ್ತು ಸಾಗಿದರು. ಕಿತ್ತೂರು ಚೆನ್ನಮ್ಮ, ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧೀಜಿ, ಕನ್ನಡಾಂಬೆ ಸೇರಿದ ವಿವಿಧ ಮಹನೀಯರ ವೇಷಭೂಷಣ ತೊಟ್ಟು ವಿದ್ಯಾಥಿರ್ಗಳು ನೆರದ ಜನರ ಮನ ಸೆಳೆದರು.
ಲಕ್ಕುಂಡಿ ಗ್ರಾಮದ ದಾನ ಚಿಂತಾಮಣಿ ಅತ್ತಿಮಬ್ಬೆ ಮಹಿಳಾ ವಿವಿಧೊದ್ದೇಶಗಳ ಸಂ ಮತ್ತು ಶ್ರೀ ಗಾರ್ಮೆಂಟ್ಸ್​ ವತಿಯಿಂದ ಟ್ರ್ಯಾಕ್ಟರ್​ ನಲ್ಲಿ ಭುವನೇಶ್ವರಿದೇವಿ ಭಾವಚಿತ್ರದ ಮೆರವಣಿಗೆ ಹಾಗೂ ಕೋಲಾಟ ತಂಡ ಗಮನ ಸೆಳೆಯಿತು. ಲಕ್ಕುಂಡಿಯ ಶ್ರೀಕೋಟೆ ವೀರಭದ್ರೇಶ್ವರ ಕಲಾ ತಂಡದಿಂದ ನಂದಿಕೋಲು, ಎಚ್​.ಎಸ್​. ವೆಂಕಟಾಪೂರ ಗ್ರಾಮದ ಮಹಷಿರ್ ವಾಲ್ಮೀಕಿ ಕಲಾ ಸಂಸ್ಥೆ ಹಾಗೂ ಬಾಲಸಿದ್ದೇಶ್ವರ ತಂಡದಿಂದ ಜಾಂಜ್​ ಮೇಳ, ಬೆಟಗೇರಿಯ ವೀರಭದ್ರೇಶ್ವರ ವೀರಗಾಸೆ ಕಲಾತಂಡದಿಂದ ವೀರಗಾಸೆ, ನರಗುಂದ ಯೋಗೇಶ ಗುಡಾರದ ತಂಡದಿಂದ ಜಗ್ಗಲಿಗೆ ಪ್ರದರ್ಶನ ಆಕಷಿರ್ಸಿತು.
ಸರಕಾರಿ ಹಿರಿಯ ಪ್ರೌಢಶಾಲೆಯಿಂದ ಆರಂಭಗೊಂಡ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆಯು ಬಸ್​ ನಿಲ್ದಾಣದ ಮಾರ್ಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಉತ್ಸವದ ದಾನ ಚಿಂತಾಮಣಿ ಅತ್ತಿಮಬ್ಬೆ ವೇದಿಕೆಯವರೆಗೆ ಸಾಗಿತು.
ಮೆರವಣಿಗೆಯಲ್ಲಿ ಎಂಸಿಎ ನಿಗಮದ ಅಧ್ಯ ಎಂ.ಎಸ್​. ಕರಿಗೌಡ್ರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯ ಸಿದ್ಧಪ್ಪ ಪಲ್ಲೇದ, ಗ್ರಾಪಂ ಅಧ್ಯೆ ಲಲಿತಾ ಗದಗಿನ, ಉಪಾಧ್ಯ ರೇವಣಸಿದ್ದಪ್ಪ ಮುಳಗುಂದ, ಜಿಲ್ಲಾ ಉಸ್ತುವಾರಿ ಕಾರ್ಯದಶಿರ್ ಮೊಹಮ್ಮದ್​ ಮೊಹಸಿನ್​, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್​, ಸಿಇಒ ಸುಶಿಲಾ ಬಿ, ಜಿಪಂ ಉಪಕಾರ್ಯದಶಿರ್ ಬಸವರಾಜ ಅಡವಿಮಠ ಹಲವರು ಇದ್ದರು.
ಬಾಕ್ಸ್​:
ಜಿಲ್ಲೆ ಹೊರತುಪಡಿಸಿ ಇತರೆ ಜಿಲ್ಲೆಯ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದು ವಿಶೇಷ. ಉಡುಪಿಯ ಶ್ರೀ ದುರ್ಗಾ ಮಹಿಳಾ ಚಂಡೆ ಬಳಗದಿಂದ ಮಹಿಳಾ ಚಂಡೆ ವಾದ್ಯ, ಚಿಕ್ಕಮಗಳೂರಿನ ಶ್ವೇತಾ ತಂಡದಿಂದ ಮಹಿಳಾ ವೀರಗಾಸೆ, ಮಂಡ್ಯದ ಸವಿತಾ ಚಿರಕುನ್ನಯ್ಯ ತಂಡದಿಂದ ಮಹಿಳಾ ಪೂಜಾ ಕುಣಿತ, ಜಿಲ್ಲೆಯ ಸೊರಟೂರ ಗ್ರಾಮದ ವೀರಭದ್ರೇಶ್ವರ ಕಲಾತಂಡದಿಂದ ಕೀಲು ಕುದುರೆ ಸೇರಿ ವಿವಿಧ ಕಲಾತಂಡಗಳು ಮೆರವಣಿಗೆಯ ಮೆರುಗನ್ನು ಹೆಚ್ಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net