ಗಬ್ಬೆದ್ದು ನಾರುತ್ತಿರುವ ಬೀರನೂರ ಗ್ರಾಮ

ydg2
ಶಹಾಪುರ ತಾಲೂಕಿನ ಗ್ರಾಮ ಪಂಚಾಯಿತಿ ಕೇಂದ್ರಸ್ಥಾನವಾದ ಬೀರನೂರ ಗ್ರಾಮದ ಮುಖ್ಯ ರಸ್ತೆಯಲ್ಲಿ ಕಲುಷಿತ ನೀರು ಹರಿಯುತ್ತಿರುವುದು.
Published on

ಶಹಾಪುರ: ತಾಲೂಕಿನ ಗ್ರಾಮ ಪಂಚಾಯಿತಿ ಕೇಂದ್ರಸ್ಥಾನವಾಗಿರುವ ಬೀರನೂರ ಗ್ರಾಮ ಅಧಿಕಾರಿಗಳ ನಿರ್ಲಕ್ಷÈಕ್ಕೆ ಒಳಗಾಗಿ, ಇಡೀ ಗ್ರಾಮ ಗಬ್ಬೆದ್ದು ನಾರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಕುರಿತು ತಾಲೂಕು ಪಂಚಾಯಿತಿ ಅಧಿಕಾರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕಳೆದ ಒಂದು ತಿಂಗಳಿAದ ಪಿಡಿಒ ಗ್ರಾಮಕ್ಕೆ ಬಂದಿಲ್ಲ. ಗ್ರಾಪಂನಲ್ಲಿ ಯಾರು ಹೇಳುವವರು ಕೇಳುವವರು ಇಲ್ಲದಂತಾಗಿದೆ. ಮಳೆ ಮತ್ತು ಚರಂಡಿ ನೀರು ರಸ್ತೆ ಮೇಲೆ ಹರಿದು ದುರ್ವಾನೆ ಹರಡುತ್ತಿದೆ. ಇಷ್ಟೇಲ್ಲ ಸಮಸ್ಯೆ ಇದ್ದರೂ ಒಬ್ಬ ಜನಪ್ರತಿನಿಧಿ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಗ್ರಾಮದ ಮೌನೇಶ ಬೊಮನಳ್ಳಿ, ಅಖಂಡೇಶ ದಂಡAಬಳಿ, ಭೀಮಾಶಂಕರ ಕೊಂಕಲï, ಶಿವರಾಜ ಬೇಗಾರ, ಮೌನೇಶ ಹಳಿಮನಿ, ಮಲ್ಲಿಕಾರ್ಜುನ ಆಂದೇಲಿ, ಶಿವರಾಜ ಚಿಕ್ಕಮೇಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ಗಳಲ್ಲಿ ಕಲುಷಿತ ನೀರು ಸೇರಿದ್ದು, ಅದೇ ನೀರು ಸರಬರಾಜು ಮಾಡಲಾಗುತ್ತಿದೆ. ಗ್ರಾಮದಲ್ಲಿ ಜನರು ಓಡಾಡಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾತ್ರಿಯಾದರೆ ಸಾಕು ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಜನರು ನೆಮ್ಮದಿಯಾಗಿ ಇರಲು ಸಾಧ್ಯವಾಗುತ್ತಿಲ್ಲ. ವಿದ್ಯುತ್ ಮೇಲಿಂದ ಮೇಲೆ ಕಡಿತಗೊಳ್ಳುತ್ತದೆ. ಸೊಳ್ಳಗಳ ಕಾಟದಿಂದ ಜನ, ಜಾನುವಾರುಗಳು ತತ್ತರಿಸುವಂತಾಗಿದೆ. ಸಾಂಕ್ರಾಮಿಕ ರೋಗ ಹರಡುವ ಮುನ್ನ ಗ್ರಾಪಂ ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತು ಕ್ರಮ ಕೈಗೊಳ್ಳಬೇಕು. ಹಾಗೊಂದು ವೇಳೆ ವಿಳಂಬ ಮಾಡಿದ್ದಲ್ಲಿ ಗ್ರಾಪಂ ಎದುರು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net