ಗಮಕ ಪರಿಷತ್ ಜಿಲ್ಲಾ ಘಟಕ ಉದ್ಘಾಟನೆ

16rajesh2
Published on

ಚಾಮರಾಜನಗರ: ಕರ್ನಾಟಕ ಗಮಕ ಕಲಾ ಪರಿಷತ್ ಚಾಮರಾಜನಗರ ಜಿಲ್ಲಾ ಘಟಕ ಉದ್ಘಾಟನಾ ಸಮಾರಂಭವನ್ನು ೆ.17 ರಂದು ಆಯೋಜಿಸಲಾಗಿದೆ ಎಂದು ಪರಿಷತ್ ಜಿಲ್ಲಾಧ್ಯಕ್ಷ ಸುರೇಶ್ ಎನ್.ಋಗ್ವೇದಿ ಮಾಹಿತಿ ನೀಡಿದರು.

ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಪ್ರಕಾಶ ಭವನದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜಯೋಗಿನಿ ಬಿ.ಕೆ.ದಾನೇಶ್ವರಿ ಸಾನಿಧ್ಯವಹಿಸುವರು.

ಗಮಕ ರತ್ನಾಕರ ರಾಮಚಂದ್ರ ಮೈಸೂರು ಉದ್ಘಾಟನೆ ನೆರವೇರಿಸುವರು. ಗಮಕ ಕಲಾ ಪರಿಷತ್ ಜಿಲ್ಲಾಧ್ಯಕ್ಷ ಸುರೇಶ್ ಎನ್.ಋಗ್ವೇದಿ ಅಧ್ಯಕ್ಷತೆ ವಹಿಸುವರು. ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಅಧಿಕಾರಿ ಡಾ.ಎ.ನಿರಂಜನ್ ಹಾಗೂ ಡಾ.ಧರಿತ್ರೀ ಆನಂದ್ ರಾವ್ ಗಮಕ ವಾಚನ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಶ್ರೀಭಗವದ್ಗೀತಾ ಅಭಿಯಾನ ಸಮಿತಿ ಅದ್ಯಕ್ಷ ಜಿ.ಎಂ.ಹೆಗಡೆ, ಭಾರತ ಸೇವಾ ದಳದ ಜಿಲ್ಲಾಧ್ಯಕ್ಷ ವೆಂಕಟನಾಗಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net