ಗಮನ ಸೆಳೆದ ಕಲಾ ತಂಡಗಳ ಪ್ರದರ್ಶನ

01-DVD-1
Published on

ದೇವದುರ್ಗ: ಕರ್ನಾಟಕ ರಾಜ್ಯೋತ್ಸವವನ್ನು ತಾಲೂಕಾದ್ಯಂತ ಶುಕ್ರವಾರ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ತಾಲೂಕು ಆಡಳಿತ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಭುವನೇಶ್ವರಿ ದೇವಿ ಭಾವಚಿತ್ರ ಮೆರವಣಿಗೆ ನಡೆಯಿತು.

ತಾಪಂ ಆವರಣಲ್ಲಿ ಆಯೋಜಿಸಿದ್ದ ಮೆರವಣಿಗೆಗೆ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ ಚಾಲನೆ ನೀಡಿದರು. ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಮಹಾತ್ಮ ಗಾಂಧಿ ವೃತ್ತ, ಬಸವೇಶ್ವರ ಚೌಕ್ ಮೂಲಕ ಸಾರ್ವಜನಿಕ ಕ್ಲಬ್ ಮೈದಾನದವರೆಗೆ ಮೆರವಣಿಗೆ ಜರುಗಿತು. ಡೊಳ್ಳು, ಬಾಜಾ-ಭಜಂತ್ರಿ, ಕಲಾ ತಂಡಗಳ ಪ್ರದರ್ಶನ ಗಮನ ಸೆಳೆದವು. ವಿವಿಧ ಶಾಲೆ ವಿದ್ಯಾರ್ಥಿಗಳು ಹಾಗೂ ಕನ್ನಡ ಪರ ಸಂಘಟನೆಗಳ ಸದಸ್ಯರು ಭಾಗವಹಿಸಿ ಘೋಷಣೆ ಕೂಗಿ ಮೆರಗು ತಂದರು.

ನಂತರ ಸಾರ್ವಜನಿಕ ಕ್ಲಬ್ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ, ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ, ತಾಪಂ ಇಒ ಬಸವರಾಜ ಹಟ್ಟಿ, ತಾಲೂಕು ಆರೋಗ್ಯ ಅಧಿಕಾರಿ ಡಾ.ಬನದೇಶ್ವರ, ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ, ತಾಪಂ ಎಡಿ ಅಣ್ಣರಾವ್, ಕಸಾಪ ತಾಲೂಕು ಅಧ್ಯಕ್ಷ ಎಚ್.ಶಿವರಾಜ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net