ಗಮನ ಸೆಳೆದ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ

mysore
Published on

ಮೈಸೂರು: ಸಿರಿಧಾನ್ಯ ಮತ್ತು ಸಾವಯವ ಮೇಳ ಅಂಗವಾಗಿ ಕೃಷಿ ಇಲಾಖೆಯಿಂದ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಮಂಗಳವಾರ ಏರ್ಪಡಿಸಲಾಗಿತ್ತು.

ಜಂಟಿ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ನಡೆದ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ 21 ಜನ ಅಭ್ಯರ್ಥಿಗಳು ಭಾಗವಹಿಸಿದ್ದರು. ಸ್ಪರ್ಧಿಗಳು ವಿವಿಧ ಸಿರಿಧಾನ್ಯಗಳನ್ನು ಬಳಸಿ ತಯಾರಿಸಿದ ಸಿಹಿ, ಖಾರ ಹಾಗೂ ಮರೆತು ಹೋದ ಖಾದ್ಯ ಖಾದ್ಯಗಳನ್ನು ಪ್ರದರ್ಶಿಸಿದರು.

ಖಾರದ ಖಾದ್ಯ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ಕ್ರಮವಾಗಿ ಗೀತಾರಾವ್, ಎನ್.ಮಂಜುಳಾ, ಸಿ.ಪೂರ್ಣಿಮಾ ಪಡೆದುಕೊಂಡರು.

ಸಿಹಿ ಖಾದ್ಯ ವಿಭಾಗದಲ್ಲಿ ಪ್ರಥಮ ಬಹುಮಾನವನ್ನು ಎಲ್.ಮಹದೇವಮ್ಮ, ದ್ವಿತೀಯ ಬಹುಮಾನವನ್ನು ಮಂಜುಳಾ ಅರಸ್, ತೃತೀಯ ಬಹುಮಾನವನ್ನು ಸಿ.ನಾಗರಾಜು ಮತ್ತು ಎಸ್.ಪಲ್ಲವಿ ಪಡೆದುಕೊಂಡರು. ಮರೆತು ಹೋದ ಖಾದ್ಯ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ಕ್ರಮವಾಗಿ ಟಿ.ಪಲ್ಲವಿ, ಭಾಗೀರತಿ, ಡಾ.ಯದುಗಿರಿ ಗಳಿಸಿದರು.

ಎಲ್ಲ ವರ್ಗಗಳ ಪ್ರಥಮ ಬಹುಮಾನ ವಿಜೇತರು ಬೆಂಗಳೂರಿನಲ್ಲಿ ಜ.7ರಂದು ನಡೆಯುವ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಭಾಗವಹಿಸುವರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಚ್. ಸೆಲ್ವಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಜಂಟಿ ಕೃಷಿ ನಿರ್ದೇಶಕ ಕೆ.ಎಚ್ ರವಿ, ಉಪ ಕೃಷಿ ನಿರ್ದೇಶಕರಾದ ಬಿ.ಎನ್.ಧನಂಜಯ, ಕೆ.ರಾಜು ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net