ಗಲಭೆಕೋರರ ವಿರುದ್ಧ ಕಠಿಣ ಕ್ರಮ ಜರುಗಿಸಿ

H14 BJP SC Morcha
Published on

ಹುಬ್ಬಳ್ಳಿ: ಬೆಂಗಳೂರಿನ ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದ ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿ ನಿವಾಸದ ಮೇಲೆ ದಾಳಿ ನಡೆಸಿದ ಗಲಭೆಕೋರರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಬಿಜೆಪಿ ಹು-ಧಾ ಮಹಾನಗರ ಜಿಲ್ಲಾ ಎಸ್​ಸಿ ಮೋರ್ಚಾ ವತಿಯಿಂದ ಶುಕ್ರವಾರ ಪ್ರತಿಭಟಿಸಲಾಯಿತು.

ಶಾಸಕರ ಕುಟುಂಬವನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸಿರುವುದು ಖಂಡನೀಯ. ಇದರ ಜತೆಗೆ ಪೊಲೀಸರು, ಮಾಧ್ಯಮದವರು ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಮಾಡಿರುವುದು ಅಮಾನವೀಯ ಘಟನೆಯಾಗಿದೆ. ದಲಿತರ ಮೇಲೆ ದೌರ್ಜನ್ಯ ಎಸಗುವ ಉದ್ದೇಶ ಇದರ ಹಿಂದೆ ಗೋಚರಿಸುತ್ತಿದೆ. ಇದರ ಹಿಂದೆ ಮುಸ್ಲಿಮರ ತುಷ್ಟೀಕರಣಕ್ಕಾಗಿ ಕಾಣದ ವ್ಯಕ್ತಿಗಳ ಕೈವಾಡ ಎದ್ದು ಕಾಣುತ್ತಿದೆ. ಸರ್ಕಾರ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿ ಕಠಿಣ ಕ್ರಮ ಜರುಗಿಸಬೇಕು. ಅಖಂಡ ಶ್ರೀನಿವಾಸ ಅವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಬಿಜೆಪಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಬಸವರಾಜ ಕುಂದಗೋಳಮಠ, ಎಸ್​ಟಿ ಮೋರ್ಚಾ ಅಧ್ಯಕ್ಷ ಬಸವರಾಜ ಅಮ್ಮಿನಬಾವಿ, ಪುಂಡಲೀಕ ತಳವಾರ, ತಿಪ್ಪಣ್ಣ ಮಜ್ಜಗಿ, ದತ್ತಮೂರ್ತಿ ಕುಲಕರ್ಣಿ, ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net