ಗಲಾಟೆಯಲ್ಲಿ ಚೂರಿ ಇರಿತಕ್ಕೊಳಗಾಗಿದ್ದ ಯುವಕ ಸಾವು

GDG Sandeep Mundevadi
Published on

ಗದಗ: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ಚೂರಿ ಇರಿತಕ್ಕೊಳಗಾಗಿದ್ದ ಯುವಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ಸಂಭವಿಸಿದೆ.

ನಗರದ ಜವುಳಗಲ್ಲಿ ನಿವಾಸಿ ಸಂದೀಪ ಮುಂಡೇವಾಡ (22) ಮೃತ ಯುವಕನಾಗಿದ್ದಾನೆ. ಸ್ನೇಹಿತರಿಂದಲೇ ಆರಂಭವಾದ ಗಲಾಟೆಯಲ್ಲಿ ಸಂದೀಪ ಮುಂಡೇವಾಡಿಯ ಹೊಟ್ಟೆ ಭಾಗಕ್ಕೆ ಚೂರಿಯಿಂದ ಚುಚ್ಚಲಾಗಿದ್ದು, ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಗದಗ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net