ಗಾಂಜಾ: ಆರೋಪಿ ಸೆರೆ, 5 ಕೆಜಿಗೂ ಹೆಚ್ಚು ಮಾಲು ವಶ

Ganja
Published on

ಮೈಸೂರು: ಗಾಂಜಾ ಹೊಂದಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮೈಸೂರು ನಗರ ವ್ಯಾಪ್ತಿಯಲ್ಲಿ ಪೊಲೀಸರು ಗಸ್ತಿನಲ್ಲಿದ್ದಾಗ ಮಂಡಿ ಮೊಹಲ್ಲಾದ ಸುನ್ನಿಚೌಕದಲ್ಲಿ ದ್ವಿಚಕ್ರ ವಾಹನದಲ್ಲಿ ಇಬ್ಬರು ಕುಳಿತಿದ್ದರು. ಪೊಲೀಸರನ್ನು ನೋಡಿ ಒಬ್ಬ ಓಡಿ ಹೋಗಿದ್ದಾನೆ. ಮತ್ತೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ. ಆಗ ದ್ವಿಚಕ್ರ ವಾಹನದಲ್ಲಿ ಗಾಂಜಾ ಇಟ್ಟುಕೊಂಡಿರುವುದು ಪತ್ತೆಯಾಗಿದೆ. ಸುಮಾರು 2.06 ಲಕ್ಷ ರೂ. ಮೌಲ್ಯದ 5 ಕೆಜಿ 150 ಗ್ರಾಂ ತೂಕದ ಗಾಂಜಾ ಹಾಗೂ ಅದನ್ನು ತೂಕ ಮಾಡಲು ಇಟ್ಟುಕೊಂಡಿದ್ದ ಯಂತ್ರ, ಸಾಗಣೆಗೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಮಂಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದ್ದು, ಪರಾರಿಯಾದ ಆರೋಪಿ ಪತ್ತೆ ಕಾರ್ಯವೂ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net