

ಸಿದ್ದಾಪುರ: ಮನೆ ಸಮೀಪದ ಕಾಫಿ ತೋಟವೊಂದರಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ರೈತನನ್ನು ವಶಕ್ಕೆ ಪಡೆಯಲಾಗಿದೆ.
ವಿರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಂಗಿ ಗುಡ್ಲೂರಿನ ಕೃಷಿಕ ಐರಿ ಕಿರಣ್ ಬಂಧಿತ. ಗಾಂಜಾ ಬೆಳೆದಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್ಪೆಕ್ಟರ್ ಅನೂಪ್ ಮಾದಪ್ಪ ನೇತೃತ್ವದಲ್ಲಿ ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿ ದಿಡೀರ್ ನಡೆಸಿದ ವೇಳೆ ಕಾಫಿ ತೋಟದಲ್ಲಿ ಬೆಳೆದು ನಿಂತಿದ್ದ 17 ಗಿಡಗಳನ್ನು ವಶಕ್ಕೆ ಪಡೆಯಲಾಗಿದ್ದು, ಅಂದಾಜು 31.900 ಗ್ರಾಂ ತೂಕದ 2.50 ಲಕ್ಷ ರೂ. ಮೌಲ್ಯ ಎಂದು ಅಂದಾಜಿಸಲಾಗಿದೆ.
ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಘವೇಂದ್ರ, ಉಪ ವಲಯ ಅರಣಾಧಿಕಾರಿ ಶ್ರೀನಿವಾಸ್, ಚೆನ್ನವೀರೇಶ್ ಸೇರಿದಂತೆ ಅಧಿಕಾರಿಗಳ ಸಮ್ಮುಖದಲ್ಲಿ ಆರೋಪಿಯನ್ನು ಬಂಧಿಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಸಿದ್ದಾಪುರ ಪೊಲೀಸ್ ಠಾಣೆ ಎಎಸ್ಐ ತಮ್ಮಯ್ಯ, ಸಿಬ್ಬಂದಿ ಲಕ್ಷ್ಮಿಕಾಂತ್, ಬಸವರಾಜ್, ಸಂತೋಷ್, ಉಮೇಶ್, ಗುರುಪ್ರಸಾದ್, ಭರತ್, ಚಾಲಕ ಈರಪ್ಪ ಪಾಲ್ಗೊಂಡಿದ್ದರು.