

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ನಗರದ ಸೂಜಿ ಮಲ್ಲೇಶ್ವರ ನಗರದಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿ, ಮಾರಾಟ ಮಾಡುತ್ತಿದ್ದ ಕಿಂಗ್‌ಪಿನ್ ತಳಕಿನ ಮೆಹಬೂಬ್‌ನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಅಬಕಾರಿ ಡಿಸಿ ಡಾ.ಬಿ.ಮಾದೇಶ್ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನ. 6ರಂದು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದ ಅಧಿಕಾರಿಗಳು 6.8 ಲಕ್ಷ ರೂ. ಮೌಲ್ಯದ 13 ಕೆ.ಜಿ ಒಣ ಗಾಂಜಾವನ್ನು ವಶಪಡಿಸಿಕೊಂಡಿದ್ದರು. ಆದರೆ, ಆರೋಪಿ ಪರಾರಿಯಾಗಿದ್ದ. ನಂತರ ಕಾರ್ಯಾಚರಣೆ ಮೂಲಕ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.