

ಯಳಂದೂರು: ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಪುರಾಣಿ ಪೋಡಿನ ವ್ಯಾಪ್ತಿಯಲ್ಲಿ ಸೋಮವಾರ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿಗಳಿಬ್ಬರು ಪುರಾಣಿ ಪೋಡಿಗೆ ತೆರಳುವ ಮುಖ್ಯ ರಸ್ತೆಯ ಬಳಿ ಬಸ್‌ಗಾಗಿ ಕಾಯುತ್ತಿದ್ದರು. ಈ ವೇಳೆ ಸಾಮಾಜಿಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ಕರ್ ಅಕ್ಷಯ್ ಅಶೋಕ್ ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಕೆ.ಪಿ.ಕುಮಾರ್, ಉಪ ವಲಯ ಅರಣ್ಯಾಧಿಕಾರಿ ಕೃಷ್ಣಮೂರ್ತಿ, ಡಿ.ಕೆ.ಮಧು, ಜಿ.ಎಂ.ಭಾನುಪ್ರಕಾಶ್, ಆಕಾಶ್, ನಾಗೇಂದ್ರ ಜಡೇಸ್ವಾಮಿ, ರಾಮಶೆಟ್ಟಿ ಅವರ ನೇತೃತ್ವದ ತಂಡ ದಾಳಿ ನಡೆಸಿ 575 ಗ್ರಾಂ ಸಂಸ್ಕರಿಸಿದ ಗಾಂಜಾದೊಂದಿಗೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.