ಗಾಂಜಾ ಮಾರಾಟಕ್ಕೆ ಯತ್ನಿಸಿದ ಇಬ್ಬರ ಬಂಧನ

arrested
Published on

ಮೈಸೂರು: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಡಿಮಹೊಲ್ಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಂಡಿಮೊಹಲ್ಲಾ ನಿವಾಸಿ ಸೈಯದ್ ಮೊಹಮದ್, ಕೆಸರೆ ನಿವಾಸಿ ನಯೀಮ್ ಪಾಷಾ ಎಂಬುವವರು ಬಂಧಿತರು.

ಏ.22ರಂದು ಮಂಡಿಮೊಹಲ್ಲಾ ಠಾಣಾ ಪೊಲೀಸರು ಬನ್ನಿಮಂಟಪ ಕೈಗಾರಿಕಾ ಬಡಾವಣೆ ಬಳಿ ಗಸ್ತಿನಲ್ಲಿದ್ದ ವೇಳೆ ಆರೋಪಿ ಸೈಯದ್ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ.

ಪೊಲೀಸರು ಆತನ ಬಳಿಗೆ ತೆರಳುತ್ತಿದ್ದಂತೆ ಅಲ್ಲಿಂದ ಓಡಿ ಹೋಗಲು ಯತ್ನಿಸಿದ್ದಾನೆ. ತಕ್ಷಣ ಆತನನ್ನು ವಶಕ್ಕೆ ಪಡೆದುಕೊಂಡು ಪರಿಶೀಲಿಸಿದ್ದಾರೆ. ಆತನ ಕೈಲಿದ್ದ ಪ್ಲಾಸ್ಟಿಕ್ ಕವರ್‌ನಲ್ಲಿ ಗಾಂಜಾ ಪತ್ತೆಯಾಗಿದೆ.

ವಿಚಾರಣೆ ವೇಳೆ ಆತ ನಯೀಮ್ ಬಳಿ ಗಾಂಜಾ ಖರೀದಿಸಿದ್ದಾಗಿ ತಿಳಿಸಿದ್ದಾನೆ.

ಕೆಸರೆಗೆ ತೆರಳಿದ ಪೊಲೀಸರು ಆತನನ್ನೂ ವಶಕ್ಕೆ ಪಡೆದಿದ್ದಾರೆ. 1.85 ಕೆಜಿ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net