ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

12
Published on

ಮೈಸೂರು: ನಗರದ ಹೆಬ್ಬಾಳ್ ರಿಂಗ್ ರಸ್ತೆಯಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.

ಸೈಯದ್ ನವಾಜ್ ಪಾಷ , ಉಮೇರ್ ಪಾಷಾ ಬಂಧಿತರು. 1.60 ಲಕ್ಷ ರೂ. ಮೊತ್ತದ 2.20 ಕೆ.ಜಿ. ಗಾಂಜಾ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಾಚರಣೆಯಲ್ಲಿ ಅಬಕಾರಿ ಇಲಾಖೆ ನಗರ ವಿಚಕ್ಷಣ ದಳದ ಅಬಕಾರಿ ನಿರೀಕ್ಷಕ ಸಂತೋಷ್ ಕುಮಾರ್, ಅಬಕಾರಿ ಉಪ ನಿರೀಕ್ಷಕ ರವಿಕುಮಾರ್, ಪೇದೆ ಲೋಕೇಶ್, ವಾಹನ ಚಾಲಕ ಮಂಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net