

ಕಲಬುರಗಿ: ನಗರದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಗಾಂಜಾ ಸೇವನೆ, ಮಾರಾಟಕ್ಕೆ ತಡೆಗೆ ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ವಿವಿಧೆಡೆ ದಾಳಿ ಮಾಡಿ ಗಾಂಜಾ ಸೇವಿಸುತ್ತಿದ್ದವರು ಮತ್ತು ಮಾರಾಟಗಾರರ ಮೇಲೆ ದಾಳಿ ನಡೆಸಿ, ಕೇಸ್ ದಾಖಲಿಸಿದ್ದಾರೆ.
ನಗರದ ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ನೂತನ ವಿದ್ಯಾಲಯ ಮೈದಾನದಲ್ಲಿ ದಾಳಿ ನಡೆಸಿ, ಗಾಂಜಾ ಸೇವಿಸುತ್ತಿದ್ದ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅದೇ ರೀತಿ ನಗರದ ರೋಜಾ ಠಾಣೆ ವ್ಯಾಪ್ತಿಯ ಮತ್ತು ಸೆನ್ ವಿಭಾಗದವರಿಂದ ದಾಳಿ ನಡೆಸಿ, ಗಾಂಜಾ ಸೇವಿಸುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಬಂಧಿಸಿ, ಬಂಧಿತರಿAದ ೧೩೦೦ ರೂ. ಮೌಲ್ಯದ ೧೩೦ ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಡಬರಾಬಾದ್ ಕ್ರಾಸ್ ನಿವಾಸಿಗಳಾದ ಸದ್ದಾಮುದ್ದೀನ್, ಶಹಾಬಾಜ್‌ರನ್ನು ಬಂಧಿಸಲಾಗಿದೆ. ಪೊಲೀಸ್ ಕಮೀಷನರ್ ಚೇತನ್ ಆರ್.ಮಾರ್ಗದರ್ಶನದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ.