

ಶಿರಸಿ: ಅಕ್ರಮ ಗಾಂಜಾ ಮಾರಾಟ ಮತ್ತು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿರುವ ಇಲ್ಲಿನ ಮಾರುಕಟ್ಟೆ ಪೊಲೀಸರು ಆರೋಪಿತರ ಸಂಪರ್ಕದಲ್ಲಿದ್ದ ಇಬ್ಬರನ್ನು ಸೋಮವಾರ ವಶಕ್ಕೆ ಪಡೆದಿದ್ದಾರೆ.
ನಗರದ ಕಸ್ತೂರಬಾನಗರದ ಮಹ್ಮದ್ ಹಫೀಜ್ ಹಾಗೂ ತಡಕಳ್ಳಿಯ ದರ್ಶನ್ ಬಂಧಿತರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಸಂಶಯಾಸ್ಪದ ಆರೋಪಿತರ ಮೇಲೆ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.</