

ಕೊಳ್ಳೇಗಾಲ; ತಾಲೂಕಿನ ಕುಣಗಳ್ಳಿ ಗ್ರಾಮದ ಕೆರೆಯ ಬಳಿ ಒಣ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಪಟ್ಟಣದ ನೂರ್ ಮೊಹಲ್ಲಾ ಫೈಜಾನ್ ಪಾಷ ಬಂಧಿತ ಆರೋಪಿಯಾಗಿದ್ದಾನೆ. ಈತ ಒಣ ಗಾಂಜಾ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕವಿತಾ, ಡಿವೈಎಸ್ಪಿ ಎಂ. ಧರ್ಮೇಂದ್ರ ನಿರ್ದೇಶನದಂತೆ ಯಳಂದೂರು ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಶ್ರೀಕಾಂತ್ ಮಾರ್ಗದರ್ಶನದಲ್ಲಿ ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಕರಿಬಸಪ್ಪ ಹಾಗೂ ತಂಡ ದಾಳಿ ನಡೆಸಿದ್ದು ಆರೋಪಿಯನ್ನು ಬಂಧಿಸಿ 108 ಗ್ರಾಂ ತೂಕದ ಒಣ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದಾಳಿಯಲ್ಲಿ ಹೆಡ್ ಕಾನ್‌ಸ್ಟೆಬಲ್ ಸಕ್ರುನಾಯ್ಕ, ಸಿದ್ದರಾಜು, ಎಸ್ ಬಿ ಶಿವಕುಮಾರ್, ಬಸವರಾಜು ಗುತ್ತಲ್, ಶಿವಕುಮಾರ್, ಮಲ್ಲೇಶ್ ಇದ್ದಾರೆ.