ಚಾಮರಾಜನಗರ: ನಗರದ ಹೊರವಲಯದಲ್ಲಿ ಹಾದು ಹೋಗಿರುವ ಬೈಪಾಸ್ ರಸ್ತೆಯಲ್ಲಿ ಒಣ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಹನೂರು ತಾಲೂಕಿನ ವಿ.ಎಸ್.ದೊಡ್ಡಿ ಗ್ರಾಮದ ನಿವಾಸಿ ಸನಂತ್ ಕುಮಾರ್ (20) ಬಂಧಿತ ಆರೋಪಿ. ಈತ ಮೈಸೂರು ರಸ್ತೆಯಿಂದ ಚಾಮರಾಜನಗರದ ಬೈಪಾಸ್ ರಸ್ತೆ ಮಾರ್ಗವಾಗಿ ಮೂಡ್ಲುಪುರದ ಕಡೆಗೆ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಸುಮಾರು 500 ಗ್ರಾಂ ತೂಕದ ಒಣ ಗಾಂಜಾವನ್ನು ಸಾಗಿಸುತ್ತಿದ್ದನು.
ಈ ಸಂದರ್ಭದಲ್ಲಿ ಸಿ.ಇ.ಎನ್ ಪೊಲೀಸ್ ಠಾಣೆಯ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ 500 ಗ್ರಾಂ ತೂಕದ ಒಣ ಗಾಂಜಾ ಮತ್ತು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.