ಗಾಂಜಾ ಸೇವಿಸಿದ ಇಬ್ಬರ ವಿರುದ್ಧ ಕೇಸ್

ganja
Published on

ಬಾಳೆಹೊನ್ನೂರು: ಗಾಂಜಾ ಸೇವಿಸಿದ ಆರೋಪದ ಮೇಲೆ ಇಬ್ಬರ ವಿರುದ್ಧ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.

ಕಡ್ಲೇಮಕ್ಕಿ ಜಹೀರ್ ಅಬ್ಬಾಸ್ ಹಾಗೂ ಮಲಯಾಳಿ ಕಾಲನಿ ಇಬ್ರಾಹಿಂ ಆರೋಪಿಗಳು. ಇಬ್ಬರೂ ಪ್ರತ್ಯೇಕ ಸ್ಥಳಗಳಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿ ಬರುತ್ತಿದ್ದಾಗ ಗಸ್ತಿನಲ್ಲಿದ್ದ ಪೊಲೀಸರು ಅನುಮಾನಗೊಂಡು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಸೇವಿಸಿರುವುದನ್ನು ಒಪ್ಪಿಕೊಂಡಿದ್ದಾರೆ. ಬಳಿಕ ಎನ್.ಆರ್.ಪುರ ತಾಲೂಕು ಆಸ್ಪತ್ರೆಯಲ್ಲಿ ಮೂತ್ರ ತಪಾಸಣೆ ನಡೆಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪಿಎಸ್‌ಐ ರವೀಶ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net