ಗಾಂಧಿ ತತ್ವ ಮರೆಯುತ್ತಿರುವುದು ಸರಿಯಲ್ಲ

02 krp 01
ಕೆ.ಆರ್.ಪೇಟೆ ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮವನ್ನು ತಹಸೀಲ್ದಾರ್ ಎಂ.ವಿ.ರೂಪಾ ಭಾನುವಾರ ಉದ್ಘಾಟಿಸಿದರು. ಕುಮಾರ್, ಡಾ.ಶಿವಕುಮಾರ್, ಟಿ.ಎಸ್.ಮಂಜುನಾಥ್, ಚಂದ್ರಕಲಾ ಇತರರಿದ್ದರು.
Published on

ಕೆ.ಆರ್.ಪೇಟೆ: ನಾವು ಮಹಾತ್ಮಾ ಗಾಂಧೀಜಿ ಅವರನ್ನು ಮರೆತಿಲ್ಲ. ಆದರೆ ಅವರ ತತ್ವ, ಆದರ್ಶಗಳನ್ನು ಮರೆಯುತ್ತಿರುವುದು ಸರಿಯಲ್ಲ ಎಂದು ತಹಸೀಲ್ದಾರ್ ಎಂ.ವಿ.ರೂಪಾ ಬೇಸರ ವ್ಯಕ್ತಪಡಿಸಿದರು.

ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕು ಆಡಳಿತದ ವತಿಯಿಂದ ಭಾನುವಾರ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪಾಶ್ಚಿಮಾತ್ಯ ಸಂಪ್ರದಾಯ, ಮೌಲ್ಯಗಳನ್ನು ಅನುಸರಿಸುವಾಗ ಒಳ್ಳೆಯ ಅಂಶಗಳನ್ನು ಮಾತ್ರ ಅನುಸರಿಸಬೇಕು. ಆದರೆ ಪಾಶ್ಚಿಮಾತ್ಯ ಪ್ರಭಾವವು, ಇಡೀ ವಿಶ್ವಕ್ಕೆ ಶಾಂತಿ, ಅಹಿಂಸಾ ಪಾಲನೆ, ಸತ್ಯಾಗ್ರಹಗಳಂತಹ ವ್ಯಕ್ತಿಗತ ಬಲವನ್ನು ಪರಿಚಯಿಸಿದ ಗಾಂಧೀಜಿ ಅವರ ಆದರ್ಶ, ಮೌಲ್ಯಗಳನ್ನೂ ಮರೆಯುವಂತೆ ಮಾಡಿದೆ. ಸ್ವಾರ್ಥಕ್ಕಾಗಿ ಗಾಂಧೀಜಿ ಹೆಸರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಪುರಸಭಾ ಮುಖ್ಯಾಧಿಕಾರಿ ಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶಿವಕುಮಾರ್, ನರೇಗಾ ಯೋಜನೆ ಸಹಾಯಕ ನಿರ್ದೇಶಕ ಡಾ.ನರಸಿಂಹರಾಜು, ಅಗ್ನಿಶಾಮಕ ಠಾಣಾಧಿಕಾರಿ ಶಿವಣ್ಣ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಎಸ್.ಮಂಜುನಾಥ್, ಕಸಬಾ ರಾಜಸ್ವ ನಿರೀಕ್ಷಕಿ ಚಂದ್ರಕಲಾ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net