ಗಾಂಧಿ- ಶಾಸ್ತ್ರೀ ಜಯಂತಿ ಆಚರಣೆ

bkt-2-2
ಬಾಗಲಕೋಟೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಗಾಂಽ ಜಯಂತಿ ಹಾಗೂ ಲಾಲಬಹದ್ದೂರ ಶಾಸ್ತ್ರೀ ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಆಚರಿಸಲಾಯಿತು. ಶಾಸಕ ವೀರಣ್ಣ ಚರಂತಿಮಠ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧುಕಾರಿ ಟಿ.ಭೂಬಾಲನ್ ಇತರರರು ಇದ್ದರು.
Published on

ಬಾಗಲಕೋಟೆ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲಬಹದ್ದೂರ ಶಾಸ್ತ್ರೀ ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಭಾನುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಾಸಕ ವೀರಣ್ಣ ಚರಂತಿಮಠ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ ಹಕ್ಕರಕಿ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಯುಕೆಪಿಯ ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಮಹಾವ್ಯವಸ್ಥಾಪಕ ರಾಹುಲ್‌ರತ್ನಂ ಪಾಂಡೆ, ಉಪವಿಭಾಗಾಽಕಾರಿ ಶ್ವೇತಾ ಬೀಡಿಕರ ಗಾಂಧಿ ಹಾಗೂ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಗೈದು ನಮನ ಸಲ್ಲಿಸಿದರು.
ವಿವಿಧ ಧರ್ಮದ ಗುರುಗಳಾದ ಸಂಸ್ಕೃತ ಪಂಡಿತ ಬಿಂಧುಮಾಧವಾಚಾರ್ಯ ನಾಗಸಂಪಗಿ ಭಗವದ್ಗೀತಾ, ಸೇಂಟ್ ಸನ್ಸ್ ಸಿಸ್ಟರ ಪಾಲ್ವಿತ್ ಡಿಸೋಜಾ ಬೈಬಲ್ ಹಾಗೂ ಆಸೀಪ್ ಎಲ್.ಮುದಗಲ್ಲ ಅವರು ಕುರಾನ್ ಕುರಿತು ಉಪದೇಶ ನೀಡಿದರು. ಬಸವೇಶ್ವರ ಕಲಾ ಮಹಾವಿದ್ಯಾಲಯದ ಡಾ.ಆರ್.ಎಂ.ಬೆಣ್ಣೂರ ಮತ್ತು ಸಂಗೀತ ವಿಭಾಗದ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಮತ್ತು ವೈಷ್ಣವ ಜನತೋ, ರಘುಪತಿ ರಾಘವ ರಾಜಾರಾಮ ಗೀತೆ ಹಾಡಿಲಾಯಿತು.
ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಬಿರಾದಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಶ್ರೀ ಎಮ್ಮಿ, ಜಿಲ್ಲಾ ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹನಮರಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಚವ್ಹಾಣ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net