ಗಾಂಧೀಜಿ ತ್ಯಾಗ, ಬಲಿದಾನ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

mysore
Published on

ಮೈಸೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ತ್ಯಾಗ, ಬಲಿದಾನ ಸದಾ ನಮಗೆಲ್ಲರಿಗೂ ಆದರ್ಶಪ್ರಾಯವಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗಾಂಧಿ ಜಯಂತಿ ಪ್ರಯುಕ್ತ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪಾರ್ಚನೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಇಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶವಾಗಿವೆ ಎಂದರು.

ಇಂದು ಮಾಜಿ ಪ್ರಧಾನಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಹೌದು. ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿ ಅವರು ಎಂದು ಸ್ಮರಿಸಿದರು.

ಕಾಕತಾಳೀಯ ಎಂಬಂತೆ ವಿಜಯದಶಮಿಯೂ ಬಂದಿದ್ದು, ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಶುಭಾಶಯಗಳನ್ನು ಸಿಎಂ ತಿಳಿಸಿದರು. ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕ ಕೆ.ಹರೀಶ್‌ಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net