ಗಾಂಧೀಜಿಯವರ ತತ್ವದಾರ್ಶ ಮೈಗೂಡಿಸಿಕೊಳ್ಳಿ

03 CRP 01
Published on



ಹಾಸನ: ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ್ಯ ತಂದುಕೊಟ್ಟು ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಮಹಾನ್ ವ್ಯಕ್ತಿ ಮಹಾತ್ಮ ಗಾಂಧೀಜಿ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಅಭಿಪ್ರಾಯಪಟ್ಟರು.

ಚನ್ನರಾಯಪಟ್ಟಣ ತಾಲೂಕಿನ ದಿಡಗ ಗ್ರಾಮದ ಸರ್ಕಾರಿ ಫ್ರೌಢಶಾಲೆಯ ಆವರಣದಲ್ಲಿ ಹಳೆಯ ವಿದ್ಯಾರ್ಥಿಗಳ ಸಹಕಾರದೊಂದಿಗೆ ನಿರ್ಮಿಸಿರುವ ಮಹಾತ್ಮ ಗಾಂಧೀಜಿ ಪುತ್ಥಳಿಯನ್ನು ಸೋಮವಾರ ಅನಾವರಣಗೊಳಿಸಿ ಮಾತನಾಡಿದರು.

ಗಾಂಧೀಜಿಯವರಿಗೆ ಅವರೇ ಸಾಟಿ. ಈ ಭೂಮಿ ಇರುವವರೆಗೂ ಅವರ ನೆನಪು ಶಾಶ್ವತವಾಗಿರುತ್ತದೆ. ಅವರ ತತ್ವ, ಆದರ್ಶ, ಸಂದೇಶಗಳನ್ನು ಯುವ ಸಮುದಾಯ ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.ಶ್ರೀ ಮಾತಾ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಎಚ್.ಎಂ.ನಾಗಪ್ಪ ಅಧ್ಯಕ್ಷತೆ ವಹಿಸಿದ್ದರು.

ಗಣ್ಯರು ಪುತ್ಥಳಿಗೆ ಪುಷ್ಪಾರ್ಚನೆ ಮಾಡಿದರು. ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾವಿತ್ರಮ್ಮ, ಸದಸ್ಯೆ ಸೌಮ್ಯಾ ಗವೀಶ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಎಂ.ಆರ್.ವಾಸು, ಪುಟ್ಟರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಕೆ.ಎನ್.ಪ್ರಕಾಶ್, ಎಂಎಂಎಲ್‌ನ ನಿವೃತ್ತ ಪ್ರಧಾನ ವ್ಯವಸ್ಥಾಪಕ ಬಿದರಕೆರೆ ಲಕ್ಕಣ್ಣ, ನಿವೃತ್ತ ಶಿಕ್ಷಕರಾದ ಬಿ.ಎನ್.ಕಾವೇಟಿಗೌಡ, ಜೆ.ಬಿ.ಸುಬ್ರಾಯ, ಗಾಂಧಿವಾದಿ ಶಿವರಾಜ್, ಪ್ರಮುಖರಾದ ಪುರದ ಚಂದ್ರಣ್ಣ, ತೋಟಿ ನಾಗಣ್ಣ, ಮಂಜೇಗೌಡ, ಪ್ರಾಂಶುಪಾಲ ಡಿ.ಆರ್.ಮಂಜುನಾಥ್, ಮುಖ್ಯಶಿಕ್ಷಕ ನೀಲಿಸಿದ್ದು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net