

ಹುಣಸೂರು: ತಾಲೂಕಿನ ಗಾಗೇನಹಳ್ಳಿ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ಗ್ರಾಮ ಒನ್(ಗ್ರಾಮ 1) ಸೇವಾ ಕೇಂದ್ರವನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆರ್.ಮುತ್ತುಲಕ್ಷ್ಮೀ ಉದ್ಘಾಟಿಸಿದರು.
ಗ್ರಾಮೀಣ ಜನರಿಗೆ ಅನುಕೂಲವಾಗಲೆಂದು ಸರ್ಕಾರ ಫ್ರಾಂಚೈಸಿಗಳ ಮೂಲಕ ಗ್ರಾಮ ಒನ್ ಯೋಜನೆ ಜಾರಿಗೊಳಿಸಿದೆ. ಈ ಕೇಂದ್ರದಲ್ಲಿ ಗ್ರಾಮೀಣರಿಗೆ ಅವಶ್ಯಕವಾದ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಕಟ್ಟಡ ಕಾರ್ಮಿಕರ ಕಾರ್ಡ್‌ಗೆ ಅರ್ಜಿ ಸಲ್ಲಿಕೆ, ಆರ್‌ಟಿಸಿ ಸೇರಿದಂತೆ 800ಕ್ಕೂ ಹೆಚ್ಚು ಸೇವೆಗಳನ್ನು ಪಡೆಯಬಹುದು. ರೈತರು ತಾಲೂಕು ಕಚೇರಿ, ಜನಸೇವಾ ಕೇಂದ್ರಗಳಿಗೆ ಅಲೆಯುವುದು ತಪ್ಪಲಿದೆ. ಬ್ಯಾಂಕ್‌ನಿಂದ ಹಣ ಪಡೆಯುವ ಕಾರ್ಯವನ್ನೂ ಇಲ್ಲೇ ಮಾಡಿಕೊಡಲಾಗುವುದು. ಸರ್ಕಾರದ ವಿವಿಧ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿಸಲು ಈ ಯೋಜನೆ ಜಾರಿಗೊಂಡಿದ್ದು ಗ್ರಾಮೀಣರು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು.
ಸೇವಾ ಕೇಂದ್ರದ ಮುಖ್ಯಸ್ಥ ಪ್ರಸನ್ನ, ಗ್ರಾಮಸ್ಥರು ಹಾಜರಿದ್ದರು. ವಿದ್ಯಾರ್ಥಿಗಳಿಗೆ ಅಬಾ ಕಾರ್ಡ್, 10ಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರಿಗೆ ಕಾಡ್‌ಗಾಗಿ ಉಚಿತವಾಗಿ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಲಾಯಿತು.