

ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಚೌಡ್ಕಿ ಚಂದ್ರಪ್ಪ ಶನಿವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಹರಿಜನ ಜಾನಕಮ್ಮ ಮತ್ತು ಊ. ಮಲ್ಲಮ್ಮ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ನಡೆದಿದ್ದು, ಹರಿಜನ ಜಾನಕಮ್ಮ ೧೨ ಮತಗಳನ್ನು ಪಡೆದು ಜಯಭೇರಿ ಬಾರಿಸಿದರೆ, ಪ್ರತಿಸ್ಪರ್ಧಿ ಊ.ಮಲ್ಲಮ್ಮ ೯ ಮತಕ್ಕೆ ಸೀಮಿತರಾಗಿದ್ದಾರೆ. ಹೊಸಪೇಟೆ ಸಹಾಯಕ ಕೃಷಿ ನಿರ್ದೇಶಕ ವಾಮದೇವ ಕೊಳ್ಳಿ ಅವರು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಪಿಡಿಒ ಮಲ್ಲಿಕಾರ್ಜು ಇದ್ದರು.