ಗಾಯಗೊಂಡಿದ್ದ ಯುವತಿ ಸಾವು

New Train
Published on

ಮಂಡ್ಯ: ನಗರದ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ತಾಲೂಕಿನ ಹೆಬ್ಬಕವಾಡಿ ಗ್ರಾಮದ ನಂಜೇಗೌಡ ಹಾಗೂ ಲಕ್ಷ್ಮೀ ದಂಪತಿ ಪುತ್ರಿ ವಿಜಯಲಕ್ಷ್ಮೀ(22) ಮೃತರು. ಇವರು ಮೈಸೂರಿನಿಂದ-ಬೆಂಗಳೂರಿಗೆ ತೆರಳುತ್ತಿದ್ದ ಮಾಲ್ಗುಡಿ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಮಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆಂದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಂಡ್ಯ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net