ಗಿಡ ನೆಟ್ಟು ಡಾ.ಶ್ಯಾಮಪ್ರಸಾದ್ ಮುಖರ್ಜಿ ಸವಿನೆನಪು

ಗಿಡ ನೆಟ್ಟು ಡಾ.ಶ್ಯಾಮಪ್ರಸಾದ್ ಮುಖರ್ಜಿ ಸವಿನೆನಪು
Published on

ಹಾಸನ: ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಸವಿನೆನಪಿನ ದಿನದ ಭಾಗವಾಗಿ ನಗರದ 14ನೇ ವಾರ್ಡ್ ಸಾಲಗಾಮೆ ರಸ್ತೆ ಬಳಿ ಇರುವ ಪಾರ್ಕ್‌ನಲ್ಲಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ನೇತೃತ್ವದಲ್ಲಿ ಗಿಡಗಳನ್ನು ನೆಡಲಾಯಿತು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದೇಶ್ ನಾಗೇಂದ್ರ ಅವರು, ದೇಶದ ಸೇವೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಸವಿನೆನಪಿನಲ್ಲಿ ಬಿಜೆಪಿ ವತಿಯಿಂದ ಬಲಿದಾನ ದಿನವೆಂದು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಘಟಕದಿಂದ ಎಲ್ಲಾ ತಾಲೂಕು ಘಟಕಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಗುತ್ತಿದೆ. ತಾಯಿ ನೆನಪಿನಲ್ಲಿ ಒಂದು ಗಿಡ ನೆಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವಂತೆ ಬಿಜೆಪಿ ಕಾರ್ಯಕರ್ತರು ಪಾರ್ಕ್‌ನಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟಿದ್ದಾರೆ. ಗಿಡವನ್ನು ನೆಟ್ಟು ಪೋಷಿಸಿ ಪ್ರಕೃತಿಯನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕಾಗಿದೆ ಎಂದು ಕರೆ ನೀಡಿದರು.
ಇದೆ ವೇಳೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, 14ನೇ ವಾರ್ಡಿನ ಸದಸ್ಯ ವಿಕ್ರಂ, ಬಿಜೆಪಿ ನಗರಾಧ್ಯಕ್ಷ ಮಂಜಣ್ಣ, ಗ್ರಾಮಾಂತರ ಅಧ್ಯಕ್ಷ ಯಶು, ಗಿರೀಶ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಗಗನ್, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಹರ್ಷಿತ್, ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷೆ ರತ್ನಾ, ಸುಶೀಲಾ ಅಣ್ಣಪ್ಪ, ತಾಪಂ ಮಾಜಿ ಅಧ್ಯಕ್ಷ ಶಿವಕುಮಾರ್, ಮಾಜಿ ಸದಸ್ಯ ಶಶಿಕುಮಾರ್, ಜಿಲ್ಲಾ ಉಪಾಧ್ಯಕ್ಷ ಆಡುವಳ್ಳಿ ಪ್ರಕಾಶ್ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net