

ಬಳ್ಳಾರಿ : ಪ್ರತಿಯೊಬ್ಬರು ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ನಾವೆಲ್ಲರೂ ಪಣತೊಡೋಣ ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಹೇಳಿದರು.
ಇಲ್ಲಿನ ಕೋಟೆ ಪ್ರದೇಶ ಕ್ರಿಕೆಟ್ ಕ್ಲಬ್ ಆವರಣದಲ್ಲಿ ಜಿಲ್ಲಾಡಳಿತ, ಬಳ್ಳಾರಿ ಪ್ರಾದೇಶಿಕ ಅರಣ್ಯ ವಿಭಾಗ, ಜಿಪಂ ಮತ್ತು ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ನೀರುಣಿಸಿ ಮಾತನಾಡಿದರು. ಎಲ್ಲರಲ್ಲೂ ಪರಿಸರದ ಕಾಳಜಿಯ ಅರಿವು ಹೊಂದಬೇಕು. ತಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟಕೊಳ್ಳಬೇಕು ಎಂದು ತಿಳಿಸಿದರು.
ಪ್ರಮುಖರಾದ ಬಳ್ಳಾರಿ ಪ್ರಾದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಇದ್ದರು.