

ಶನಿವಾರಸಂತೆ: ಪರಿಸರ ದಿನಾಚರಣೆ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಶನಿವಾರಸಂತೆ ತ್ಯಾಗರಾಜ ಕಾಲನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನೆಡುವ ಕಾರ್ಯಕ್ರಮ ಜರುಗಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕ ನಾಗರಾಜ್ ಪರಿಸರದ ಮಹತ್ವ ಕುರಿತು ಮಾಹಿತಿ ನೀಡಿ, ಪರಿಸರ ಸಂರಕ್ಷಣೆಯಲ್ಲಿ ಮಾನವನ ಪಾತ್ರ ಪ್ರಮುಖವಾದದ್ದು. ಪ್ರತಿಯೊಬ್ಬರೂ ಅರಣ್ಯ, ಪರಿಸರ ಬಗ್ಗೆ ಕಾಳಜಿ ವಹಿಸಬೇಕು. ತಮ್ಮ ಮನೆ ವಠಾರದ ಜಾಗದಲ್ಲಿ ಮರಗಿಡಗಳನ್ನು ಬೆಳೆಸಬೇಕು. ಅಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಗಿಡವನ್ನು ಬೆಳೆಸುವ ಮತ್ತು ಅದನ್ನು ನಿರ್ವಹಣೆ ಮಾಡುವ ಕಾರ್ಯದಲ್ಲಿ ತೊಡಗಿಸಿಕೊಂಡರೆ ಪರಿಸರ ಸಮೃದ್ಧಿಗೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟರು.
ಶನಿವಾರಸಂತೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸಿ.ಕೆ.ದಿನೇಶ್ ಮಾತನಾಡಿದರು. ಮುಖ್ಯಶಿಕ್ಷಕ ಪುಟ್ಟಸ್ವಾಮಿ, ಎಸ್‌ಡಿಎಂಸಿ ಅಧ್ಯಕ್ಷ ಮೋಹನ್, ಒಕ್ಕೂಟದ ಅಧ್ಯಕ್ಷೆ ಎಸ್.ಪಿ.ಭಾಗ್ಯಾ, ಎಸ್.ಆರ್.ಶೋಭಾವತಿ, ಎಸ್.ಪಿ.ದಿವ್ಯಾ ಶಾಲಾ ಶಿಕ್ಷಕರು ಇದ್ದರು.
================