ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆ

ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆ
Published on

ಹಾಸನ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ಕಾರ್ಯಕ್ರಮದ ಯೋಜನೆಯಡಿ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆ ಮಾಡುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ ಗಿರೀಶ್ ತಿಳಿಸಿದರು.
ಗಾಡೇನಹಳ್ಳಿ ಗ್ರಾಮ ಪಂಚಾಯಿತಿಗೆ ಅವರು ಗುರುವಾರ ಭೇಟಿ ನೀಡಿ ಗ್ರಾಮ ಪಂಚಾಯಿತಿ ಆವರಣದಲ್ಲಿ ತಾಯಿಯ ಹೆಸರಿನಲ್ಲಿ ಗಿಡಗಳನ್ನು ನೆಟ್ಟು ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಿದರಲ್ಲದೆ, ಗಾಡೆನಹಳ್ಳಿ ಗ್ರಾಮದ ಸೆಂಟ್ ಇಗ್ನಿಶಿಯಸ್ ಶಾಲೆಗೆ ಭೇಟಿ ನೀಡಿ ಎಲ್ಲ ವಿದ್ಯಾರ್ಥಿಗಳಿಂದ ತಾಯಿಯ ಹೆಸರಿನಲ್ಲಿ ಒಂದೊಂದು ಗಿಡ ನೆಟ್ಟು ಪರಿಸರ ಕಾಳಜಿ, ಪರಿಸರ ಉಳಿಸುವಿಕೆ ಬಗ್ಗೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸಿ.ಬಿ.ದಿನೇಶ್, ಗಾಡೆನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಮತಾ ರಾಮಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೀಮಾ ಪಠಾಣ್, ಕಾರ್ಯದರ್ಶಿ ಜವರೇಗೌಡ, ಸೆಂಟ್ ಇಗ್ನಿಶಿಯಸ್ ಶಾಲಾ ಮುಖ್ಯೋಪಾಧ್ಯಯರು ಹಾಗೂ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net