ಗಿರಿಜಿಲ್ಲೆ; ಮುಂದುವರೆದ ಮಳೆಯಾರ್ಭಟ

IMG-20230727-WA0076
Published on


ಯಾದಗಿರಿ: ಕಳೆದೊಂದು ವಾರದಿಂದ ಜಿಲ್ಲಾದ್ಯಂತ ಮಳೆಯಾರ್ಭಟ ಹೆಚ್ಚಾಗಿದ್ದು, ಜಿಟಿಜಿಟಿ ಮಳೆ ಹಿನ್ನೆಲೆಯಲ್ಲಿ ಇಲ್ಲಿಯವರೆಗೂ 237 ಮನೆಗಳು‌ ಕುಸಿತಗೊಂಡಿವೆ.

ವರ್ಷಧಾರೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಗುರುವಾರ ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸಿದೆ. ಮಳೆಯಾಗುತ್ತಿರುವ‌ ಕಾರಣ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ‌ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಜಿಲ್ಲೆಯ ಜನರ ಜೀವನಾಡಿಯಾದ ಕೃಷ್ಣ ಮತ್ತು ಭೀಮಾ ನದಿಗಳು ಮೈದುಂಬಿ ಹರಿಯುತ್ತಿವೆ. ನೀರಿನ ಹರಿವು ಹೆಚ್ಚಳಗೊಂಡ ಕಾರಣ ನೀರಿನಲ್ಲಿ ಇಳಿಯದಂತೆ ನದಿ ಪಾತ್ರದ ಗ್ರಾಮಗಳ ಜನತೆಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಇನ್ನೂ ನೆರೆಯ ಮಹಾರಾಷ್ಟ್ರದಲ್ಲೂ ಮಳೆ ವ್ಯಾಪಕವಾಗಿ ಸುರಿಯುತ್ತಿರುವ ಕಾರಣ ಕೊಯ್ನಾ ಜಲಾಶಯದಿಂದ ಆಲಮಟ್ಟಿ ಆಣೆಕಟ್ಟೆಗೆ ನೀರು ಹರಿಸಲಾಗುತ್ತಿದೆ. ಇತ್ತ ಯಾದಗಿರಿ ಹೊರ ವಲಯದಲ್ಲಿನ ಗುಲಸರಂ ಭೀಮಾ ಬ್ಯಾರೇಜ್ ನಿಂದ 45 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ.

ಮಳೆ ಹಿನ್ನಲೆಯಲ್ಲಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.‌ ವಡಿಗೇರಾ ಪಟ್ಟಣದಲ್ಲಿ ಮನೆ ಕುಸಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net