

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಗೆ ಆಯುಧ ಪೂಜೆ ಹಾಗೂ ವಿಜಯ ದಶಮಿ ಹಬ್ಬದ ರಜೆಯ ಹಿನ್ನೆಲೆಯಲ್ಲಿ ಪ್ರವಾಸಿಗರ ದಂಡೇ ಹರಿದು ಬಂದ ಹಿನ್ನೆಲೆಯಲ್ಲಿ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಪ್ರವಾಸಿಗರು ಪರದಾಡುವಂತಾಗಿತ್ತು.
ಮುಳ್ಳಯ್ಯನಗಿರಿ ಹಾಗೂ ದತ್ತಪೀಠ ಭಾಗದಲ್ಲಿ ವಾಹನ ದಟ್ಟಣೆ ತಗ್ಗಿಸುವ ಉz್ದೆÃಶದಿಂದ ಬೆಳಗ್ಗಿನ ಅವಧಿಯಲ್ಲಿ ೬೦೦ ಹಾಗೂ ಮಧ್ಯಾಹ್ನದ ಅವಧಿಯಲ್ಲಿ ೬೦೦ ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗುತ್ತಿದೆ. ಆದರೆ ಹಬ್ಬದ ರಜೆ ಹಿನ್ನೆಲೆಯಲ್ಲಿ ನಿಗದಿತ ಸಂಖ್ಯೆಯ ವಾಹನಗಳು ಒಂದೇ ಸಮಯಕ್ಕೆ ಆಗಮಿಸಿದ್ದರಿಂದ ಗಿರಿ ಭಾಗದ ರಸ್ತೆಯಲ್ಲಿ ನಾಲ್ಕೆÊದು ಕಿಲೋಮೀಟರ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹೀಗಾಗಿ ಎನ್‌ಎಂಡಿಸಿ ಸರ್ಕಲ್‌ನಿಂದ ಅಲ್ಲಂಪುರದವರೆಗೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು.
ಎನ್‌ಎAಡಿಸಿ ಬಳಿ ಇರುವ ಚೆಕ್‌ಪೋಸ್ಟ್ನಿಂದಲೇ ಟ್ರಾಫಿಕ್ ಜಾಮ್ ಉಂಟಾಗಿದ್ದರಿAದಾಗಿ ಗಿರಿ ಪ್ರದೇಶದಲ್ಲಿ ಪ್ರವಾಸಿಗರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಪೊಲೀಸರು ಗಿರಿಯ ಮೇಲ್ಭಾಗಕ್ಕೆ ಹೋಗಿದ್ದ ವಾಹನಗಳು ಕೆಳಕ್ಕೆ ಬಂದ ಬಳಿಕವೇ ಟ್ರಾಫಿಕ್‌ನಲ್ಲಿ ನಿಂತ ವಾಹನಗಳನ್ನು ಮೇಲ್ಭಾಗಕ್ಕೆ ಬಿಡಲು ಕ್ರಮ ಕೈಗೊಂಡರು. ಹೀಗಾಗಿ ಟ್ರಾಫಿಕ್‌ನಲ್ಲಿ ಸಿಲುಕಿದ ಪ್ರವಾಸಿಗರು ಗಂಟೆಗಟ್ಟಲೆ ಕಾಯುವಂತಾಗಿತ್ತು. ಒಟ್ಟಾರೆ ಸಾಲು ಸಾಲು ರಜೆಯ ಹಿನ್ನೆಲೆಯಲ್ಲಿ ಚಂದ್ರದ್ರೋಣ ಪರ್ವತ ಶ್ರೇಣಿಗೆ ಭಾರಿ ಪ್ರಮಾಣದಲ್ಲಿ ಹರಿದು ಬಂದ ಪ್ರವಾಸಿಗರನ್ನು ನಿಯಂತ್ರಿಸಲು ಪೊಲೀಸರು ಪರದಾಡುವಂತಾಗಿತ್ತು.