

ಹಾಸನ : ಬೈಕ್ ಅನ್ನು ಗುಂಡಿಗೆ ಇಳಿಸಿದ್ದರಿಂದ ಹಿಂಬದಿ ಕುಳಿತಿದ್ದ ಮಹಿಳೆ ನಿಯಂತ್ರಣ ತಪ್ಪಿ ಬಿದ್ದು ಮೃತಪಟ್ಟ ಘಟನೆ ಎಂಸಿಎಫ್ ಸಮೀಪದ ಕಂಚಮಾರನಹಳ್ಳಿಯಲ್ಲಿ ನಡೆದಿದೆ.
ಹಾಸನ ತಾಲೂಕಿನ ಕೃಷ್ಣಾನಗರದ ನಿವಾಸಿ ಕಮಲಾ (37) ಮೃತ ಮಹಿಳೆ.
ಏ.7ರಂದು ಹಾಸನ ತಾಲೂಕಿನ ಸಾಲಗಾಮೆ ಹೋಬಳಿಯ ಮಂಡಿಗನಹಳ್ಳಿ ಗ್ರಾಮದಲ್ಲಿ ಜಾತ್ರೆ ಇದ್ದುದ್ದರಿಂದ ಕಮಲಾ ಅವರು ಮಗ ಸಂಜಯ್ ಜತೆ ಬೈಕಿನಲ್ಲಿ ಹೋಗಿದ್ದರು. ಜಾತ್ರೆ ಮುಗಿಸಿಕೊಂಡು ವಾಪಸ್ ಊರಿಗೆ ಬರುವಾಗ ಎಂಸಿಎಫ್ ಸಮೀಪದ ಕಂಚಮಾರನಹಳ್ಳಿ ಗ್ರಾಮದ ರಸ್ತೆ ಬದಿಯಲ್ಲಿದ್ದ ಗುಂಡಿಗೆ ಇಳಿಸಿದ್ದಾರೆ. ಈ ವೇಳೆ ಬೈಕಿನ ಹಿಂಭಾಗ ಕುಳಿತಿದ್ದ ಕಮಲಾ ಅವರ ನಿಯಂತ್ರಣ ತಪ್ಪಿ ಬೈಕಿನಿಂದ ಕೆಳಗೆ ಬಿದ್ದಿದ್ದಾರೆ. ತಲೆಯ ಹಿಂಭಾಗಕ್ಕೆ ತೀವ್ರ ಪೆಟ್ಟಾಗಿದೆ. ಕೂಡಲೇ ಅವರನ್ನು ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ವೈದ್ಯರ ಸಲಹೆ ಮೇರೆಗೆ ಏ.8ರಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಏ.9ರ ಸಂಜೆ ಕಮಲಾ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ