ಗುಂಡ್ಲುಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ

Bjp Sambrama
Published on

ಗುಂಡ್ಲುಪೇಟೆ: ದೆಹಲಿಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದ ಹಿನ್ನೆಲೆಯಲ್ಲಿ ಶನಿವಾರ ಗುಂಡ್ಲುಪೇಟೆ ಮಂಡಲದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.

ಮಂಡಲಾಧ್ಯಕ್ಷ ಸಿ.ಮಹದೇವಪ್ರಸಾದ್ ನೇತೃತ್ವದಲ್ಲಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ಮಂಡಲಾಧ್ಯಕ್ಷ ಸಿ.ಮಹದೇವಪ್ರಸಾದ್, ದೆಹಲಿಯ ಪ್ರಜ್ಞಾವಂತ ಮತದಾರರು ಆಪ್ ದುರಾಡಳಿತ ಹಾಗೂ ಭ್ರಷ್ಟಾಚಾರದಿಂದ ಬೇಸತ್ತು ತಕ್ಕ ಪಾಠ ಕಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಮೇಲಿನ ನಂಬಿಕೆಯಿಂದ ಮುಸ್ಲಿಂ ಹಿಡಿತವಿರುವ ಕ್ಷೇತ್ರದಲ್ಲೂ ಹೆಚ್ಚಿನ ಮತ ನೀಡಿ ಅಭೂತಪೂರ್ವ ಗೆಲುವು ಪಡೆಯಲು ಸಾಧ್ಯವಾಯಿತು ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಮಂಡಲಾಧ್ಯಕ್ಚರಾದ ಸುರೇಶ್, ಮಲ್ಲೇಶ್, ಪುರಸಭೆ ಸದಸ್ಯರಾದ ನಾಗೇಶ್, ಕೃಷಿಕ ಸಮಾಜದ ನಿರ್ದೇಶಕ ಮಹದೇವಸ್ವಾಮಿ, ಮುಖಂಡರಾದ ವೀರಪ್ಪ ಪ್ರಕಾಶ್, ಬಸವೇಶ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net