ಗುಡ್ಡಾಪುರ ದಾನಮ್ಮದೇವಿ ಜಾತ್ರೆ ರದ್ದು

IMG-20201206-WA0001
Published on

ವಿಜಯಪುರ:ಅನ್ನದಾಸೋಹಿ ಗುಡ್ಡಾಪುರ ದಾನಮ್ಮಳ ಭಕ್ತರ ಪಾದಯಾತ್ರೆ ಹಾಗೂ ಜಾತ್ರೆ ರದ್ದುಗೊಳಿಸಲಾಗಿದೆ. ಮಹಾರಾಷ್ಟ್ರ ರಾಜ್ಯದ ಗಡಿಯಲ್ಲಿರುವ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಗುಡ್ಡಾಪುರ ದಾನಮ್ಮದೇವಿ ಜಾತ್ರೆ ಈ ಬಾರಿ ರದ್ದುಗೊಳಿಸಲಾಗಿದೆ. ಹನ್ನೆರಡನೇ ಶತಮಾನದಲ್ಲಿ ಬಸವಾದಿ ಶರಣರ ಸಮಕಾಲೀನ ಶರಣೆಯ ಕ್ಷೇತ್ರ ಅಂತಾರಾಜ್ಯ ಮಟ್ಟದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಶರಣೆ ಗುಡ್ಡಾಪುರ ದಾನಮ್ಮದೇವಿ ಛಟ್ಟಿ ಅಮವಾಸ್ಯೆಗೆ ಲಕ್ಷಾಂತರ ಭಕ್ತರು ಪಾದಯಾತ್ರೆ ಮಾಡುತ್ತಿದ್ದರು. ಆದರೆ ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಡಿಸೆಂಬರ್ 13 ರಿಂದ 16 ರ ವರೆಗೆ ನಡೆಯಬೇಕಿದ್ದ ಗುಡ್ಡಾಪುರ ದಾನಮ್ಮದೇವಿ ಜಾತ್ರೆ ಜಾತ್ರೆ ರದ್ದು ಮಾಡಲಾಗಿದೆ ಎಂದು ಶ್ರೀದಾನಮ್ಮದೇವಿ ದೇವಸ್ಥಾನ ಟ್ರಸ್ಟ್ ಸಮೀತಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net