ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನ ನಾಳೆ

Published on

ನಾಪೋಕ್ಲು: ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಗಲ್ಲಿಗೇರಿಸಲ್ಪಟ್ಟ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನ ಕಾರ್ಯಕ್ರಮವನ್ನು ಅ.31ರಂದು ಮಡಿಕೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 9.30 ಗಂಟೆಗೆ ಮಡಿಕೇರಿ ಸುದರ್ಶನ ವೃತ್ತದಲ್ಲಿರುವ ಗುಡ್ಡೆಮನೆ ಅಪ್ಪಯ್ಯಗೌಡರ ಸ್ಮಾರಕದ ಬಳಿ ಪುಷ್ಪಾರ್ಚನೆ, ವಿವಿಧ ಕಲಾತಂಡಗಳಿಂದ ದೇಶಭಕ್ತಿ ಗೀತೆ ಗಾಯನ ಕಾರ್ಯಕ್ರಮ ನಡೆಯಲಿದೆ. ನಂತರ ಸಾಂಪ್ರದಾಯಿಕ ಉಡುಗೆಯಲ್ಲಿ ಮಡಿಕೇರಿ ಕೋಟೆಯವರೆಗೆ ಮೆರವಣಿಗೆ ಸಾಗಿ ಕೋಟೆ ಆವರಣದಲ್ಲಿ ಗಣ್ಯರಿಂದ ಪುಷ್ಪಾರ್ಚನೆ, ಗುಡ್ಡೆಮನೆ ಅಪ್ಪಯ್ಯಗೌಡರ ಕುರಿತು ಲಾವಣಿ ಪದಗಳ ಗಾಯನ, ಗಣ್ಯರಿಂದ ಉಪನ್ಯಾಸವಿದೆ.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅರೆ ಭಾಷಿಕ ಬಾಂಧವರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net