ಗುಡ್ಲೂರಿನಲ್ಲಿ ಕೈಲ್ ಮುಹೂರ್ತ ಹಬ್ಬದ ಸಂಭ್ರಮ

ಚಿತ್ರ 04ಎಸ್ ಡಿ ಪಿ 01-
Published on

ಸಿದ್ದಾಪುರ: ಕೊಡಗು ಜಿಲ್ಲೆಯ ಸಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಕೈಲ್ ಮುಹೂರ್ತ ಹಬ್ಬವನ್ನು ಸಂಭ್ರಮ ಸಡಗರದಿಂದ ಗುಡ್ಲೂರು ಗ್ರಾಮದಲ್ಲಿ ಆಚರಿಸಲಾಯಿತು


ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಲೂರಿನ ಬಸವೇಶ್ವರ ಸಂಘದ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಕೈಲ್ ಮುಹೂರ್ತ ಹಬ್ಬದ ಗ್ರಾಮೀಣ ಕ್ರೀಡಾಕೂಟವನ್ನು ಮಾಜಿ ಸೈನಿಕ ಮಹೇಶ್ ಉದ್ಘಾಟಿಸಿದರು.


ಸಾಮಾಜಿಕ ಕಾರ್ಯಕರ್ತ ಪ್ರಭಾಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೊಡಗಿನ ವಿಶೇಷ ಮತ್ತು ವಿಶಿಷ್ಟವಾದ ಹಬ್ಬವಾಗಿದ್ದು, ಜಿಲ್ಲೆಯಲ್ಲಿ ಕೃಷಿ ಕಾರ್ಯ ಮುಗಿದ ನಂತರ ನೇಗಿಲು, ಕೋವಿಗಳಿಗೆ ಪೂಜೆ ಸಲ್ಲಿಸಿ ಬಂಧು-ಬಳಗ, ಮಿತ್ರರೊಡನೆ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಾರೆ. ಕ್ರೀಡಾಕೂಟದಲ್ಲಿ ಎಲ್ಲ ಗ್ರಾಮಸ್ಥರು ಭಾಗವಹಿಸಿದಾಗ ಕ್ರೀಡಾಕೂಟಕ್ಕೆ ಮೆರುಗು ತರಲಿದೆ ಎಂದು ಹೇಳಿದರು.


ಹಿರಿಯರು, ಪುರುಷರು, ಮಹಿಳೆಯರು, ಮಕ್ಕಳಿಗೆ ಗ್ರಾಮೀಣ ಕ್ರೀಡೆಗಳಾದ ಓಟದ ಸ್ಪರ್ಧೆ, ಮಡಕೆ ಒಡೆಯುವ ಸ್ಪರ್ಧೆ, ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಆಯೋಜಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಜಿ.ಟಿ.ಸೋಮಯ್ಯ, ಅಯ್ಯಪ್ಪ, ರಮೇಶ್, ಉಮೇಶ, ತಮ್ಮಣಿ, ಜಿತು, ಶಾಂತಿ, ಕಿರಣ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net