ಗುಣಮಟ್ಟದ ಕಲಿಕೆಗೆ ಸಹಕಾರಿ

20rajesh4
Published on

ಚಾಮರಾಜನಗರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಗುಣಮಟ್ಟದ ಕಲಿಕೆಯನ್ನು ವೃದ್ಧಿಸಲು ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ಶಿಕ್ಷಣ ಸಂಯೋಜಕ ರೇವಣ್ಣ ತಿಳಿಸಿದರು.

ತಾಲೂಕಿನ ಬಾಗಳಿ ಕ್ಲಸ್ಟರ್ ವ್ಯಾಪ್ತಿಯ ಬಾಣಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಶಾಸ್ತ್ರದಲ್ಲಿ ಪರಿಪೂರ್ಣಗೊಳಿಸಲು 1-5 ನೇ ತರಗತಿ ವಿದ್ಯಾರ್ಥಿಗಳಿಗೆ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷ ಪುನೀತ್, ಮುಖ್ಯಶಿಕ್ಷಕಿ ಮಂಜುಳಾ, ಶಂಕರ್, ಸಿಆರ್‌ಪಿ ಮಂಜುನಾಥ್, ಶಿಕ್ಷಕರ ಸಂಘದ ನಿರ್ದೇಶಕ ನಟರಾಜ್, ಸಂಪನ್ಮೂಲ ವ್ಯಕ್ತಿಗಳಾದ ಶಿವಮೂರ್ತಿ, ಪೊನ್ನಾಚಿ ಮಹಾದೇವಸ್ವಾಮಿ, ಶಾಂತಪ್ಪ, ಮಹಾದೇವ ಪ್ರಸಾದ್, ದೊರೆಸ್ವಾಮಿ ಹಾಗೂ ಇತರರು ಭಾಗವಹಿಸಿದ್ದರು.

1-5 ನೇ ತರಗತಿ ಮಕ್ಕಳಿಗೆ ಸಂತೋಷ ಯದಾಯಕ ಮತ್ತು ಅನುಭವ ಯುಕ್ತ ವಾತಾವರಣ ನಿರ್ಮಾಣ ಮಾಡಲು 7 ವಲಯಗಳಲ್ಲಿ ಚಟುವಟಿಕೆಗಳು ಇರುತ್ತದೆ. ಪ್ರಾಮಾಣಿಕವಾಗಿ ತೀರ್ಪು ನೀಡುವುದರ ಮೂಲಕ ಉತ್ತಮ ಕಲಿಕಾ ಚಟುವಟಿಕೆ ನೀಡುವ ವಿದ್ಯಾರ್ಥಿಗಳನ್ನು ಗುರುತಿಸಬೇಕು.

-ಹೇಮಾ, ಸಿಆರ್‌ಪಿ, ಚಾಮರಾಜನಗರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net