ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ

Malladihalli
Published on

ಚಿತ್ರದುರ್ಗ: ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿದಾಗ ಮಾತ್ರ ಸಮಾಜದ ಪ್ರಗತಿ ಸಾಧ್ಯ ಎಂದು ಆರ್ಥಿಕ ಚಿಂತಕ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ಸಲಹೆ ನೀಡಿದರು.

ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ರಾಘವೇಂದ್ರ ಬಿ.ಇಡಿ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾಲೇಜಿನ ಸಾಂಸ್ಕೃತಿಕ ಸಂಘ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣದ ನಂತರ ತಕ್ಷಣ ಉದ್ಯೋಗ ಸಿಗಬೇಕು. ಆದರೆ, ಇತ್ತೀಚಿನ ದಿನಗಳಲ್ಲಿ ಇದು ಕಷ್ಟ ಸಾಧ್ಯವಾಗುತ್ತಿದೆ. ಬಿ.ಇಡಿ ಶಿಕ್ಷಣ ಪಡೆದವರು ಬೇರೊಂದು ಕೆಲಸಕ್ಕಾಗಿ ಹುಡುಕಾಟ ನಡೆಸಬಾರದು. ಈ ಕುರಿತು ಸರ್ಕಾರ ಚಿಂತಿಸಬೇಕು ಎಂದರು.

ಅನಾಥ ಸೇವಾಶ್ರಮದ ಕಾರ್ಯದರ್ಶಿ ಎಸ್.ಕೆ.ಬಸವರಾಜನ್ ಮಾತನಾಡಿ, ಶಿಕ್ಷಕ ವೃತ್ತಿ ಪವಿತ್ರವಾಗಿದ್ದು, ಅದನ್ನು ಉತ್ತಮವಾಗಿ ನಿರ್ವಹಿಸಲು ಪೂರಕ ತರಬೇತಿ ಅಗತ್ಯವಿದೆ ಎಂದು ತಿಳಿಸಿದರು.

ಇದೇ ವೇಳೆ ದಾವಣಗೆರೆ ವಿವಿ ಮಟ್ಟದಲ್ಲಿ ಪ್ರಥಮ ರ‌್ಯಾಂಕ್ ಪಡೆದ ಕೀರ್ತನಾ, 4ನೇ ರ‌್ಯಾಂಕ್ ಪಡೆದ ಮುಸ್ಕಾನ್ ಬಾನು ಅವರನ್ನು ಸನ್ಮಾನಿಸಲಾಯಿತು.

ಪ್ರಾಚಾರ್ಯ ಡಾ.ಜಿ.ಯು.ನಾಗರಾಜ್, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಪಿ.ಕೆ.ರಾಜಪ್ಪ, ಉಪನ್ಯಾಸಕ ಪ್ರೊ.ಎನ್.ಧನಂಜಯ, ನೂರ್ ಝೈಬಾ ಖಾನಂ, ಆರ್.ಪಲ್ಲವಿ, ಯಶೋಧಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net